Categories: Ripponpete

ಮಹಿಳೆಯರಿಗೂ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ: ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ ಸೇರಿದಂತೆ ಜಾನಪದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಪುರುಷರಿಗೆ ಮಾತ್ರ ಸೀಮಿತವಾಗದೆ ಮಹಿಳೆಯರಿಗೂ ಇಂತಹ ಕ್ರೀಡಾಕೂಟ ಮತ್ತು ಸಾಂಸ್ಕೃತಿ ಸ್ಪರ್ಧೆಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕರೆ ನೀಡಿದರು.

ರಿಪ್ಪನ್‌ಪೇಟೆಯಲ್ಲಿ ಸಿದ್ದಿವಿನಾಯಕ ವಾಲಿಬಾಲ್‌ ಕ್ಲಬ್ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 10ನೇ ವರ್ಷದ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಹಿರಿಯ ವಾಲಿಬಾಲ್ ಅಟಗಾರ ಪ್ರಭಾಕರ ಬಲ್ಲಾಳ ಕಾರ್ಯಕ್ರಮ ಉದ್ಘಾಟಿಸಿದರು.
ಸಿದ್ದಿವಿನಾಯಕ ಬಾಲಿಬಾಲ್ ಕ್ಲಬ್ ಅಧ್ಯಕ್ಷ ಪಿ.ಸುಧೀರ್ ಅಧ್ಯಕ್ಷತೆ ವಹಿಸಿದ್ದರು.


ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಮಾತನಾಡಿ, ಮುಂಬರುವ ವರ್ಷದಲ್ಲಿ ರಿಪ್ಪನ್‌ಪೇಟೆಯಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಸುಸಜ್ಜಿತ ಕ್ರೀಡಾಂಗಣವನ್ನು ನಿರ್ಮಿಸುವುದರ ಬಗ್ಗೆ ಸಂಸದ ಮತ್ತು ಶಾಸಕರೊಂದಿಗೆ ಚರ್ಚಿಸಿ ಅನುದಾನ ಕೊಡಿಸುವುದಾಗಿ ಹೇಳಿದರು.

ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಹುಂಚ ಗ್ರಾ.ಪಂ.ಸದಸ್ಯ ವಿಎಸ್ ಎಸ್.ಎನ್,ಬಿ. ನಿರ್ದೇಶಕಿ ಯಶಸ್ವತಿ ವೃಷಭರಾಜ್ ಜೈನ್, ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷ್ಮಿ, ಸಾಗರದ ಯುವಮುಖಂಡ ಪ್ರಶಾಂತ, ಎನ್.ಸತೀಶ್, ಶಶಿಕುಮಾರ್ ಇನ್ನಿತರರು ಮುಖ್ಯಅತಿಥಿಗಳಾಗಿ ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ರಾಜ್ಯ ಮತ್ತು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆಗೈದ ಕ್ರೀಡಾಪಟುಗಳನ್ನು ಸಮಾರಂಭದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಬೆಂಗಳೂರನ ಶಾಹಿ ಫ್ರೆಂಡ್ಸ್ ಪ್ರಥಮ ಸ್ಥಾನ ಮತ್ತು ಹಾಸನದ ಎ.ಆರ್.ಪ್ರೋಟ್ಸ್ ದ್ವಿತೀಯ ಸ್ಥಾನ ಮಲೆನಾಡು ಪ್ರೋಟ್ಸ್ ಮಂಗಳೂರು ರ‍್ಪಾಪುರಂ ತೃತೀಯ ಮತ್ತು ನಾಲ್ಕನೇ ಸ್ಥಾನ ಗಳಿಸುವುದರೊಂದಿಗೆ ನಗದು ಬಹುಮಾನ ಮತ್ತು ಪಾರಿತೋಷಕವನ್ನು ಪಡೆದುಕೊಂಡರು.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

8 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

10 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

11 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

12 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

13 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

15 hours ago