Categories: Ripponpete

ರಿಪ್ಪನ್‌ಪೇಟೆಯ ಮೃತ ಯೋಧನ ಮನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ; ಕುಟುಂಬಕ್ಕೆ ಸಾಂತ್ವನ


ರಿಪ್ಪನ್‌ಪೇಟೆ : ರಿಪ್ಪನ್‌ಪೇಟೆಯ ಯೋಧ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಇಂದು ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದಾರೆ.

ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್ (27) ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟ ಯೋಧನ ಮನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ರಾತ್ರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಮಾದ್ಯಮದೊಂದಿಗೆ ಮಾತನಾಡಿದ ಅವರು, ಒಬ್ಬ ಯುವ ಯೋಧ ಅಕಾಲಿಕವಾಗಿ ಮೃತಪಟ್ಟಿರುವುದು ರಾಷ್ಟ್ರಕ್ಕಾದ ನಷ್ಟವಾಗಿದೆ. ದೇಶ ಸೇವೆಯನ್ನು ಮಾಡುವ ಸದುದ್ದೇಶದಿಂದ ಗ್ರಾಮೀಣ ಪ್ರದೇಶದ ಯುವಕನೊಬ್ಬ ಸೈನ್ಯಕ್ಕೆ ಸೇರಿ ಹಗಲಿರುಳು ದೇಶದ ಜನರ ರಕ್ಷಣೆಗಾಗಿ ಕಾಯಕವನ್ನು ಮಾಡಿ ಇಂದು ಅವರ ಅಕಾಲಿಕ ಮರಣ ನನಗೆ ಅತೀವ ನೋವುಂಟು ಮಾಡಿದೆ. ಮೃತ ಶರೀರವನ್ನು ಊರಿಗೆ ತರಲು ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು. ಈಗಾಗಲೇ ಈ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೀನಿ ಎಂದು ಮಾಧ್ಯಮದವರಿಗೆ ತಿಳಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೆ.ರಾವ್, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ. ಬಿ. ಮಂಜುನಾಥ್, ಮುಖಂಡರುಗಳಾದ ಆರ್ ಟಿ ಗೋಪಾಲ್, ಸುಧೀಂದ್ರ ಪೂಜಾರಿ, ಎನ್. ಸತೀಶ್. ಪಿ ಸುಧೀರ್ ಇನ್ನಿತರರಿದ್ದರು.

Malnad Times

Recent Posts

ದತ್ತಪೀಠದಲ್ಲಿ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿದ ಪ್ರವಾಸಿ ಬಸ್ ! ಬಾಲಕ ಸಾವು

ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು…

46 mins ago

ರಂಭಾಪುರಿ ಶ್ರೀಗಳ ಮೇ ತಿಂಗಳ ಪ್ರವಾಸ ಕಾರ್ಯಕ್ರಮ ವಿವರ

ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…

1 hour ago

Arecanut Today Price | ಏಪ್ರಿಲ್ 28ರ ಅಡಿಕೆ ರೇಟ್

ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

3 hours ago

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

5 hours ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

6 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

13 hours ago