ರಿಪ್ಪನ್‌ಪೇಟೆ ; ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

0 49

ರಿಪ್ಪನ್‌ಪೇಟೆ: ಇಲ್ಲಿನ ಹೊಸನಗರ-ಶಿವಮೊಗ್ಗ ಮುಖ್ಯ ರಸ್ತೆ ಪಕ್ಕದಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆ ತುಂಬಿಕೊಂಡಿದ್ದು ಜನ ಜಾನುವಾರುಗಳಿಗೂ ಯೋಗ್ಯವಲ್ಲದ ಸ್ಥಿತಿಯಲ್ಲಿದ್ದ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ. ವಿಶೇಷ ಅನುದಾನವನ್ನು ನೀಡುವುದರೊಂದಿಗೆ ಕೆರೆಯ ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು.


ರಿಪ್ಪನ್‌ಪೇಟೆಯಲ್ಲಿ 458ನೇ “ನಮ್ಮೂರು ನಮ್ಮ ಕೆರೆ’’ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ ಹೂಳೆತ್ತುವುದರಿಂದ ಕೆರೆಗಳಲ್ಲಿ ನೀರು ಸಂಗ್ರಹವಾಗಿ ಅಂತರ್ಜಲ ವೃದ್ದಿಯಾಗುವುದು ಅಲ್ಲದೆ ಬೇಸಿಗೆಯಲ್ಲಿ ಸಹ ಜನ ಜಾನುವಾರುಗಳಿಗೆ ಕುಡಿಯಲು ನೀರು ದೊರೆಯುವುದೆಂದ ಹೇಳಿ ಇದರಿಂದಾಗಿ ಗ್ರಾಮದ ಅಭಿವೃದ್ದಿಗೆ ಹೆಚ್ಚು ಸಹಕಾರಿಯಾಗುವುದೆಂದರು.


ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಜೆ.ಚಂದ್ರಶೇಖರ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯ ಯೋಜನೆಯ ಸೌಲಭ್ಯಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.


ಹೊಸನಗರ ತಾಲ್ಲೂಕ್ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಬೇಬಿ, ಉಪಾಧ್ಯಕ್ಷೆ ಮಹಾಲಕ್ಷ್ಮಿ, ಚಿಕ್ಕಬೀರನ ಕೆರೆ ಸಮಿತಿಯ ಅಧ್ಯಕ್ಷ ಎನ್.ಸತೀಶ್ ಪಿಡಿಓ ಜಿ.ಚಂದ್ರಶೇಖರ್, ಅಮ್ಮೀರಹಂಜಾ, ಎಂ.ಬಿ.ಮಂಜುನಾಥ, ಇಂಜಿನಿಯರ್ ಗಣಪತಿ, ಶಶಿಧರ, ಪೂರ್ಣಿಮಾ, ಟಿ.ಆರ್.ಕೃಷ್ಣಪ್ಪ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯರು ಪಾಲ್ಗೊಂಡಿದ್ದರು.

Leave A Reply

Your email address will not be published.

error: Content is protected !!