Categories: Ripponpete

ರಿಪ್ಪನ್‌ಪೇಟೆ : ಜು.22 ರಂದು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ರಿಪ್ಪನ್‌ಪೇಟೆ: ಇಲ್ಲಿನ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಮಹಿಳೆಯರು ಅಧ್ಯಕ್ಷ ಕಾರ್ಯದರ್ಶಿಯಾಗಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವುದರೊಂದಿಗೆ ಪುರುಷರಿಗಿಂತ ನಾವುಗಳು ಏನು ಕಮ್ಮಿ ಎಂಬಂತೆ ಹಿಡಿದ ಸಮಾಜಮುಖಿ ಕಾರ್ಯದೊಂದಿಗೆ ರೋಟರಿಯ ಧೇಯವಾಕ್ಯದಂತೆ ಸಮಾಜಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ರೋಟರಿ ಕ್ಲಬ್ ಅಧ್ಯಕ್ಷೆ ಪ್ರಮೀಳಾ ಎಲ್.ಗೌಡ ಮತ್ತು ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ರೋಟರಿ ಅತ್ಯುತ್ತಮ ಕಾರ್ಯದಲ್ಲಿ ಸಾರ್ವಜನಿಕರ ಪ್ರಶಂಸೆಗಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ ಎಂ.ಬಿ.ಲಕ್ಷ್ಮಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

ರಿಪ್ಪನ್‌ಪೇಟೆಯ ರೋಟರಿ ಕ್ಲಬ್ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದೇ 22 ರಂದು ಶನಿವಾರ ಸಂಜೆ ಜಿ.ಎಸ್.ಬಿ.ಕಲ್ಯಾಣ ಮಂದಿರದಲ್ಲಿ 2023-24 ನಾಲಿನ “ಪದವಿ ಸ್ವೀಕಾರ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜಿ.ಎಸ್.ಬಿ.ಕಲ್ಯಾಣ ಮಂದಿರಲ್ಲಿ ಆಯೋಜಿಸಲಾಗಿದೆ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಎಲ್.ಗೌಡ ವಹಿಸುವರು.

2023-24 ನೇ ಸಾಲಿನ ನೂತನ ಅಧ್ಯಕ್ಷ ದೇವದಾಸ ಆರ್.ಹೆಚ್. ಇವರಿಗೆ ಮಾಜಿ ಅಸಿಸ್ಟಂಟ್ ಗವರ್ನರ್ ವಲಯ 11 ವಸಂತ್ ಹೋಬಳಿದಾರ್ ಪದವಿ ಪ್ರಧಾನವನ್ನು ಮಾಡುವರು.

ಅಸಿಸ್ಟಂಟ್ ಗವರ್ನರ್ ವಲಯ 11 ರ ರವಿ ಕೋಟೋಜಿ ಮತ್ತು ಝೋನಲ್ ಲೆಪ್ಟಿನೆಂಟ್ ಚಂದ್ರಪ್ಪ ಕೆ.ಟಿ.ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಹಾಗೂ ಪ್ರಸಕ್ತ ಸಾಲಿನಲ್ಲಿ ರೋಟರಿ ಕ್ಲಬ್ ಮೌಲ್ಯಧಾರಿತ ಶಿಕ್ಷಣ ಮತ್ತು ಮಣ್ಣಿನ ಫಲವತ್ತತೆಯ ಸಂರಕ್ಷಣೆ ಹಾಗೂ ಇತ್ಯಾಜ್ಯ ನಿರ್ವಹಣೆ ಸುರಕ್ಷತ ವಾಹನ ಚಾಲನೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ ಮತ್ತು ಕ್ಲಬ್ ಇತರ ಕಾರ್ಯಕ್ರಮಗಳಾದ ರಕ್ತ ದಾನ ಶಿಬಿರ, ನೇತ್ರ ತಪಾಸಣೆ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ, ರೈತ ಮಿತ್ರ, ಶಿಕ್ಷಕರಿಗೆ ಸನ್ಮಾನ, ಅಂಗಾಂಗದಾನದ ಮಹತ್ವದ ಅರಿವು ಮೂಡಿಸುವ ಕಾರ್ಯಕ್ರಮ ಮಳೆಕೊಯ್ಲು, ಆಯ್ದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಕಲಿಕಾ ಸಾಮಗ್ರಿಗಳ ವಿತರಣೆ ಇಂತಹ ಜನಪರ ಕಾರ್ಯಕ್ರಮಗಳನ್ನು ರೋಟರಿ ಕ್ಲಬ್ ಹಮ್ಮಿಕೊಂಡಿದೆ ಎಂದು ನೂತನ ಅಧ್ಯಕ್ಷ ದೇವದಾಸ್ ಆರ್.ಹೆಚ್. ಮಾಧ್ಯಮದವರ ಬಳಿ ಹಂಚಿಕೊಂಡರು.

ಈ ಸುದ್ದಿಗೋಷ್ಠಿಯಲ್ಲಿ ರೋಟರಿ ಕ್ಲಬ್ ಅಧ್ಯಕ್ಷೆ ಪ್ರಮೀಳ ಎಲ್.ಗೌಡ, ಕಾರ್ಯದರ್ಶಿ ಎಂ.ರಾಮಚಂದ್ರ, ಗಣೇಶ ಕಾಮತ್, ಜೆ.ರಾಧಾಕೃಷ್ಣ, ಡಾಕಪ್ಪ, ಎಂ.ಬಿ.ಮಂಂಜುನಾಥ, ನಿ.ಮು.ಶಿಕ್ಷಕ ರಾಧಾಕೃಷ್ಣ ಹೆಚ್.ಎಂ.ವರ್ತೇಶ್‌ಗೌಡರು, ಸುಧೀಂದ್ರ ಹೆಬ್ಬಾರ್, ಇನ್ನಿತರರು ಹಾಜರಿದ್ದರು.

Malnad Times

Recent Posts

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

48 mins ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

2 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

2 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

3 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

6 hours ago

Election Boycott |  ಮೂಲಭೂತ ಸೌಲಭ್ಯದ ಕೊರತೆ, ಹೊಸನಗರ ತಾಲೂಕಿನ ಮತ್ತೊಂದು ಗ್ರಾಮದಲ್ಲಿ ಕೇಳಿಬಂದ ಚುನಾವಣೆ ಬಹಿಷ್ಕಾರದ ಕೂಗು !

ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ.…

6 hours ago