Categories: Ripponpete

ರಿಪ್ಪನ್‌ಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ ; ಮನೆ ಕಳ್ಳತನದ ಆರೋಪಿಗಳ ಬಂಧನ

ರಿಪ್ಪನ್‌ಪೇಟೆ: ಸಮೀಪದ ಗಂದ್ರಳ್ಳಿ ಗೋವಿಂದನಾಯ್ಕ್ ಎಂಬುವವರ ಮನೆಯ ಹೆಂಚು ಕಿತ್ತು ಮನೆಯಲ್ಲಿದ್ದ ಸುಮಾರು 1.50 ಲಕ್ಷ ರೂ. ಹಾಗೂ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಪ್ರಕರಣವನ್ನು ಭೇದಿಸುವ ಮೂಲಕ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ರಿಪ್ಪನ್‌ಪೇಟೆ ಪಿಎಸ್ಐ ಎಸ್.ಪಿ.ಪ್ರವೀಣ್ ಮತ್ತು ಸಿಬ್ಬಂದಿವರ್ಗ ಯಶಸ್ವಿಯಾಗಿದ್ದಾರೆ.


ಇದೇ ತಿಂಗಳು 8 ರಂದು ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಂದ್ರಳ್ಳಿ ಗ್ರಾಮದ ಗೋವಿಂದನಾಯ್ಕ ಎಂಬುವರು ತಮ್ಮ ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕ ಮನೆಮಂದಿಯೆಲ್ಲ ಮನೆಗೆ ಬೀಗ ಹಾಕಿ ಹೋಗಿರುವುದನ್ನು ನೋಡಿ ಮನೆಯ ಹಿಂಭಾಗದ ಮಹಡಿ ಹೆಂಚು ಕಿತ್ತು ಮನೆಯೊಳಗೆ ಇಳಿದು ಮನೆಯಲ್ಲಿದ್ದ ನಗದು, ಚಿನ್ನಾಭರಣವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ತಂಡವನ್ನು ಖಚಿತ ಮಾಹಿತಿಯನ್ನಾದರಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಸಿಬ್ಬಂದಿವರ್ಗ ಪತ್ತೆ ಹಚ್ಚಿ ಕೇವಲ ಹದಿನೈದು ದಿನದೊಳಗೆ ಕಳ್ಳತನದ ಆರೋಪಿಗಳನ್ನು ಪತ್ತೆ ಮಾಡುವುದರೊಂದಿಗೆ ಕಳವು ಮಾಡಲಾದ ಚಿನ್ನಾಭರಣವನ್ನು ವಶಪಡಿಸಿಕೊಳ್ಳುವ ಮೂಲಕ ಜನಸ್ನೇಹಿ ಪೊಲೀಸ್ ಇಲಾಖೆಯೆಂದು ಜನಮೆಚ್ಚುಗಗೆ ಪಾತ್ರರಾಗಿದ್ದಾರೆ.


ಆರೋಪಗಳಾದ ಬಿಳಕಿ ಗ್ರಾಮದ ಕೆ.ಎನ್.ಸುದರ್ಶನ ಬಿನ್ ನಾಗಪ್ಪ (23), ಎಸ್.ಆದರ್ಶ ಬಿನ್ ಸ್ವಾಮಿನಾಯ್ಕ್ (23), ಬಿ.ಕೆ.ಮಧುಸೂದನ್ ಬಿನ್ ಕರಿಯಪ್ಪ (30) ಬಂಧಿಸಿ ಐಪಿಸಿ ಸೆಕ್ಷನ್ 457, 380 ರಡಿಯಲ್ಲಿ ಕೇಸ್ ದಾಖಲಿಸಿದ್ದಾರೆ.


ನ್ಯಾಮತಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ರಿಪ್ಪನ್‌ಪೇಟೆ ಠಾಣೆಗೆ ವರ್ಗಾವಣೆಯಾಗಿ ಬಂದು ಅಧಿಕಾರ ಸ್ವೀಕರಿಸಿ ಒಂದು ವಾರದೊಳಗೆ ಇಲ್ಲಿನ ಪಿಎಸ್‌ಐ ಎಸ್.ಪಿ.ಪ್ರವೀಣ್ ಕಾರ್ಯದಕ್ಷತೆಯನ್ನು ಪ್ರಶಂಸಿಸುವಂತೆ ಮಾಡಿದ್ದಾರೆ.
ಇವರು 17 ವರ್ಷಗಳ ಕಾಲ ಸೈನಿಕರಾಗಿ ದೇಶ ಸೇವೆ ಮಾಡಿ ಈಗ ಪೊಲೀಸ್ ಇಲಾಖೆಯಲ್ಲಿ ಪಿಎಸ್‌ಐ ಅಗಿ ಸೇವೆ ಸಲ್ಲಿಸುತ್ತಾ ಇರುವ ಎಸ್.ಪಿ.ಪ್ರವೀಣ್ ಇವರು ಪೊಲೀಸ್ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರ, ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಪಾರ್ಕಿಂಗ್ ಬಗ್ಗೆ ಜನಜಾಗೃತಿ ಸೇರಿದಂತೆ ಅನೇಕ ಜನಸ್ನೇಹಿ ಕಾರ್ಯಕ್ರಮಗಳನ್ನು ರೂಪಿಸಿ ಜನರ ವಿಶ್ವಾಸ ಗಳಿಸುವತ್ತಾ ಸಾಗಿದ್ದಾರೆ.


ಅರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಕ್ರೇಂ ಸಿಬ್ಬಂದಿಗಳಾದ ಶಿವಕುಮಾರ್, ಉಮೇಶ್, ಚಾಲಕ ಮಧು ಇನ್ನಿತರ ಸಿಬ್ಬಂದಿವರ್ಗ ಪಾಲ್ಗೊಂಡಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago