Categories: Ripponpete

ರಿಪ್ಪನ್‌ಪೇಟೆ ; ಬಹುತೇಕ ಶಾಂತಿಯುತ ಮತದಾನ

ರಿಪ್ಪನ್‌ಪೇಟೆ: ಇಂದು ನಡೆದ ಸಾಗರ ಮತ್ತು ತೀರ್ಥಹಳ್ಳಿ ಕ್ಷೇತ್ರದ ವಿಧಾನಸಭಾ ಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿ ನಡೆದು ಮುಕ್ತಾಯವಾಯಿತು.

ಸುಡುವ ಬಿಸಿಲಿನ ಮಧ್ಯೆ ಮತದಾರರು ಬೆಳಿಗ್ಗೆಯಿಂದ ಸಂಜೆಯವರೆಗೆ ಹುರುಪು, ಹುಮ್ಮಸ್ಸಿನಿಂದ ಮತಗಟ್ಟೆಗಳಿಗೆ ಬಂದು ಆಸಕ್ತಿಯಿಂದ ಮತ ಚಲಾಯಿಸಿದರು.

ಸಂಜೆ ಹೊತ್ತು ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದರಿಂದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದು ಕಂಡು ಬಂದಿತು. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಜೆ 6 ಗಂಟೆ ನಂತರ ಬಿರುಗಾಳಿ ಸಹಿತ ಗುಡುಗು, ಸಿಡಿಲಬ್ಬರದ ಮಳೆ ಸುರಿಯಿತು. ವಿದ್ಯುತ್ ಸಹ ಕೈ ಕೊಟ್ಟಿತು. ಆದರೆ ಮತದಾನಕ್ಕೆ ಯಾವುದೇ ಅಡ್ಡಿಯಾಗಿಲ್ಲ.

ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲಾ ಮತಗಟ್ಟೆಯಲ್ಲಿ ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಮತ ಚಲಾಯಿಸಿದರು.

ಮಹಿಳೆಯರದ್ದೆ ಕಾರುಬಾರು

ಚುನಾವಣಾ ಆಯೋಗದವರು ವಿಶೇಷವಾಗಿ ಮಹಿಳೆಯರಿಗಾಗಿ ಮಹಿಳಾ ಸಿಬ್ಬಂದಿಗಳನ್ನು ನೇಮಿಸುವುದರೊಂದಿಗೆ ಶೇ. 100% ಸಂಪೂರ್ಣ ಮತದಾನ ಮಾಡುವುದರೊಂದಿಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಸಖಿ ಮತ ಕೇಂದ್ರವನ್ನು ಹೊಸನಗರ ತಾಲ್ಲೂಕಿನ ಅಮೃತ (ಗರ್ತಿಕೆರೆ) ಗ್ರಾಮದಲ್ಲಿ ಇಂದು ನಡೆದ ಮತದಾನ ಸಂದರ್ಭದಲ್ಲಿ ಆರಂಭಿಸಿ ಮಹಿಳಾ ಮತದಾರರಲ್ಲಿ ಹೆಚ್ಚು ಮತದಾನ ಮಾಡುವಂತೆ ಪ್ರೇರಣೆ ನೀಡಿರುವುದು ವಿಶೇಷವಾಗಿತ್ತು.

ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿನ ಹರತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಹರತಾಳು ಹಾಲಪ್ಪ ಕುಟುಂಬ ವರ್ಗ ಮತ ಚಲಾಯಿಸಿ ಹೊರಬಂದು ಕಾರ್ಯಕರ್ತರೊಂದಿಗೆ ಮತ ಕೇಂದ್ರದಲ್ಲಿ ಶಾಯಿ ಹಾಕಿರುವುದನ್ನು ಪ್ರದರ್ಶಿಸಿದರು.

ಈ ಮತ ಕೇಂದ್ರದಲ್ಲಿ ಸಾಲುಮರದ ತಿಮ್ಮಕ್ಕ, ಝಾನ್ಸಿರಾಣಿ ಲಕ್ಷ್ಮಿಬಾಯಿ, ಆನಂದಿಬಾಯಿ ಜೋಷಿ, ಸಾವಿತ್ರಿ ಬಾಯಿ ಪುಲೆ, ಕಿತ್ತೂರು ರಾಣಿ ಚೆನ್ನಮ್ಮ ಹೀಗೆ ಮಹಿಳೆಯರ ಚಿತ್ರಗಳ ಫ್ಲೆಕ್ಸ್ ಅಳವಡಿಸಿ ಹೆಚ್ಚು ಮತದಾನ ಮಾಡುವ ಮೂಲಕ ಮಹಿಳೆಯರಲ್ಲಿ ಜಾಗೃತಿ ಮೂಡಿಸವ ನಿಟ್ಟಿನಲ್ಲಿ ಸಖಿ ಪಿಂಕ್ ಬೂತ್ ಕಾರ್ಯದಲ್ಲಿ ಹೆಚ್ಚು ಆಕರ್ಷಿಸುವಂತಾಯಿತು.

ಅಮೃತ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಖಿ ಮತದಾನ ಕೇಂದ್ರದಲ್ಲಿ ಮಹಿಳಾ ಮತದಾರರು ಸರತಿ ಸಾಲಿನಲ್ಲಿ ಮತದಾನಕ್ಕೆ ನಿಂತಿರುವುದು.

660 ಕ್ಕೂ ಹೆಚ್ಚು ಮಹಿಳೆಯರು ಮತ್ತು 560 ಕ್ಕೂ ಹೆಚ್ಚಿನ ಪುರುಷ ಮತದಾರರಿರುವ ಈ ಮತ ಕೇಂದ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಲೆನಾಡ ಕೋಗಿಲೆ ಖ್ಯಾತಿಯ ಹೊ.ನಾ.ರಾಘವೇಂದ್ರ ಮತ್ತು ಅಂಗವಿಕಲರು ವೃದ್ದರು ವಿಲ್ ಚೇರ್ ಮೂಲಕ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬ್ರಹ್ಮೇಶ್ವರ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮೂಲೆಗದ್ದೆ ಮಠದ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಮತಚಲಾಯಿಸಿದರು.


ಈ ಸಂದರ್ಭದಲ್ಲಿ ತಾಲ್ಲೂಕ್ ಪಂಚಾಯ್ತಿ ಪ್ರಭಾರಿ ಇಓ ನರೇಂದ್ರ, ಗ್ರಾಮ ಪಂಚಾಯ್ತಿ ಪಿಡಿಓ ಸುಧಾ,
ಗ್ರಾಮೀಣ ವಿಕಲಚೇತನ ಕಾರ್ಯಕರ್ತೆ ಸಾವಿತ್ರಿ, ಇಓ ಕಛೇರಿಯ ಸಿಬ್ಬಂದಿ ಹರ್ಷ ಇನ್ನಿತರರು ಹಾಜರಿದ್ದರು.

Malnad Times

Recent Posts

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

1 hour ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

3 hours ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

6 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

10 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

23 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

1 day ago