Categories: Ripponpete

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾ.ಪಂ ವ್ಯಾಪ್ತಿಗಳಲ್ಲಿ ಜೂ.08 ಮತ್ತು 09 ರಂದು ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : 110/11ಕೆ.ವಿ ರಿಪ್ಪನ್‌ಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ. 08 ಮತ್ತು 09 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಜೂ. 08 ಮತ್ತು 09 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ಶಿವಮೊಗ್ಗ ಇವರು 110 ಕೆ.ವಿ ಎಸ್.ಎಸ್-2 ಮಾರ್ಗವನ್ನು ಕುಂಸಿ ವಿದ್ಯುತ್ ವಿತರಣಾ ಕೇಂದ್ರದ ಹತ್ತಿರ ಕಾಮಗಾರಿ ನಡೆಸಲು 110 ಕೆ.ಬಿ ಎಸ್.ಎಸ್-1 ಮತ್ತು 110 ಕೆ.ಬಿ ಎಸ್.ಎಸ್-2 ಮಾರ್ಗಮುಕ್ತತೆ ಪಡೆಯುತ್ತಾರೆ. ಇದರಿಂದ ಈ ಎರಡು ದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗಿನ ಸಮಯದಲ್ಲಿ ತುರ್ತು 5 ಗಂಟೆಗಳ ಕಾಲ ವಿದ್ಯುತ್‌ ಅಡಚಣೆಯಾಗುವುದು.

ಇದರಿಂದಾಗಿ 110/11 ರಿಪ್ಪನ್‌ಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

39 mins ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

1 hour ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

3 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

6 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

8 hours ago