Categories: Ripponpete

ವಿದ್ಯಾರ್ಥಿಯ ಬ್ಯಾಗ್‌ನಲ್ಲಿದ್ದ ನಾಗರಹಾವು…!

ರಿಪ್ಪನ್‌ಪೇಟೆ :‌ ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಭುವನ್ ಬ್ಯಾಗಿನಲ್ಲಿ ಸದ್ದಿಲ್ಲದೆ ಮಲಗಿದ್ದ ನಾಗರಾಜ.

ಶುಕ್ರವಾರ ಬೆಳಗ್ಗೆ ಶಾಲೆಯ ಬೆಲ್ಲು ಹೊಡೆದು ತರಗತಿ ಪ್ರಾರಂಭವಾದಾಗ ನಲಿ-ಕಲಿ ತರಗತಿಯ ಶಿಕ್ಷಕ ಪಾಠ ಓದಲು ಪುಸ್ತಕ ಬ್ಯಾಗಿನಿಂದ ಹೊರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿ, ಹಾಜರಾತಿ ಕರೆಯುತ್ತಿದ್ದರು. ವಿದ್ಯಾರ್ಥಿ ಭುವನ್ ಶಿಕ್ಷಕರ ಅಣತಿಯಂತೆ ಪುಸ್ತಕ ಹೊರತೆಗೆದಾಗ ಖಾಲಿ ಬ್ಯಾಗಿನಲ್ಲಿ ಮಲಗಿದ್ದ ಹಾವನ್ನು ಕಂಡಿದ್ದಾನೆ.

ಮಣಿಕಂಠ

ತನ್ನ ಪಕ್ಕದಲ್ಲಿ ಕುಳಿತಿದ್ದ ಸಹಪಾಠಿ ಆರ್ ಮಣಿಕಂಠ ಅವನಿಗೆ ಬ್ಯಾಗಿನಲ್ಲಿ ಇರುವ ಹಾವನ್ನು ತೋರಿಸಿದ್ದಾನೆ. ಹಾವನ್ನು ಕಂಡ ತಕ್ಷಣವೇ ಮಣಿಕಂಠ ಬ್ಯಾಗಿನ ಜಿಪ್ ಎಳೆದು ಹಾವು ಹೊರಬರದಂತೆ ಮಾಡಿದ್ದಾನೆ. ನಂತರ ಬ್ಯಾಗ್ ಸಮೇತ ಶಿಕ್ಷಕರ ಬಳಿ ಬಂದು ಇದರಲ್ಲಿ ಹಾವು ಇದೆ ಎಂದು ತಿಳಿಸಿದ್ದಾನೆ.

ವಿದ್ಯಾರ್ಥಿಯ ಮಾತಿಗೆ ಚಕಿತರಾದ ಶಿಕ್ಷಕರು ಬ್ಯಾಗನ್ನು ಹೊರತಂದು ತೆರೆದು ನೋಡಿದಾಗ ಅದರಲ್ಲಿ ಸದ್ದಿಲ್ಲದೆ ಸುರುಳಿ ಸುತ್ತಿಕೊಂಡು ಬೇಟೆಗಾಗಿ ಕಾದು ಕುಳಿತ ನಾಗರ ಹಾವನ್ನು ಕಂಡು ಬೆಚ್ಚಿ ಬೀಳುವ ಸರದಿ ಶಿಕ್ಷಕರದಾಗಿತ್ತು.

ಶಾಲೆಯ ಕೂಗಳತೆ ದೂರದಲ್ಲಿದ್ದ ವಿದ್ಯಾರ್ಥಿ ಭುವನ್ ಮನೆಯಿಂದ ಪೋಷಕರನ್ನು ಕರೆಯಿಸಿದ ಶಿಕ್ಷಕರು, ಘಟನೆಯ ನೈಜ್ಯತೆ ಹಾಗೂ ಸಹಪಾಠಿ ಮಣಿಕಂಠನ ಸಮಯ ಪ್ರಜ್ಞೆಯನ್ನು ಪೋಷಕರಿಗೆ ಮನವರಿಕೆ ಮಾಡಿಕೊಟ್ಟು ನಂತರ ಪೋಷಕರ ಸಮ್ಮುಖದಲ್ಲಿ ಬ್ಯಾಗಿನಲ್ಲಿದ್ದ ವಿಷಪೂರಿತ ನಾಗರಹಾವನ್ನು ಶಿಕ್ಷಕ ವೃಂದ ಜೊತೆಗೂಡಿ ಸಮೀಪದ ಕಾಡಿಗೆ ಬಿಟ್ಟು ಬಂದರು.

ಒಟ್ಟಾರೆ ಶಾಲಾ ಬ್ಯಾಗಿನಲ್ಲಿ ಬಂದಿದ್ದ ನಾಗಪ್ಪ ಯಾರಿಗೂ ಗಂಡಾಂತರ ತರದೆ ಸುಖಾಂತ್ಯವಾಗಿ ಕಾಡು ಸೇರಿದ. ವಿದ್ಯಾರ್ಥಿ ಮಣಿಕಂಠನ ಸಮಯಪ್ರಜ್ಞೆಗೆ ಗ್ರಾಮಸ್ಥರು ಹಾಗೂ ಶಿಕ್ಷಕರು ಪ್ರಸಂಶಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago