Categories: Ripponpete

ಶ್ರೀ ನಾರಾಯಣಗುರು ಮಹಾಸಂಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ


ರಿಪ್ಪನ್‌ಪೇಟೆ : ಸಮೀಪದ ಶ್ರೀ ನಾರಾಯಣಗುರು ಮಹಾಸಂಸ್ಥಾನಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಸಂಜೆ ಭೇಟಿ ನೀಡಿ ಶ್ರೀ ರೇಣುಕಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದರು.


ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಸಹಕರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಶ್ರೀ ನಾರಾಯಣಗುರು ಮಹಾಸಂಸ್ಥಾನದ ವತಿಯಿಂದ ರೇಣುಕಾನಂದ ಸ್ವಾಮೀಜಿಗಳು ಗೌರವ ಸಮರ್ಪಣೆ ಸಲ್ಲಿಸಿ ಮಾತನಾಡಿ, ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರಕಾರದಿಂದ ಆದೇಶವಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಡಿಗ ಬಿಲ್ಲವ ಸೇರಿದಂತೆ ನಮೂದಾಗಿರುವ 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ನೀಡಿರುವುದು ಶ್ರೀ ನಾರಾಯಣ ಗುರು ಭಕ್ತರು ಗಳಿಗೆ ಸಂತಸದ ಸಂಗತಿಯಾಗಿದೆ ಎಂದರು.


ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮಂತ್ರಿಗಳಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪರವರಿಗೆ ಅಭಿನಂದನೆ ಸಲ್ಲಿಸಿದರು.

ನಿಟ್ಟೂರಿನ ಶ್ರೀ ನಾರಾಯಣಗುರು ಮಹಾಸಂಸ್ಥಾನ ಮಠದ ಭಕ್ತಾಧಿಗಳಾದ ದಿನೇಶ್, ಮಹೇಶ್, ಲಿಂಗರಾಜು, ರಮೇಶ್, ಕಾಶಿನಾಥ್ ಇನ್ನಿತರರಿದ್ದರು.

Malnad Times

Recent Posts

ಗೀತಾ ಶಿವರಾಜ್‌ಕುಮಾರ್ ರವರಿಗೆ ಒಂದು ಅವಕಾಶ ಕೊಡಿ ; ಸಾ.ರಾ. ಗೋವಿಂದು

ಶಿವಮೊಗ್ಗ: ಗೀತಾ ಶಿವರಾಜ್‌ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…

3 hours ago

ಗೀತಾ ಗ್ರಾ.ಪಂ. ಚುನಾವಣೆ ಕೂಡ ಗೆಲ್ಲಲ್ಲ ; ಕುಮಾರ್ ಬಂಗಾರಪ್ಪ

ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

4 hours ago

ಮೇ 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07…

6 hours ago

ವಕೀಲರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಚಿಕ್ಕಮಗಳೂರು: ಇಲ್ಲಿನ ವಕೀಲರ ಸಂಘದ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಸುಜೇಂದ್ರ, ಉಪಾಧ್ಯಕ್ಷರಾಗಿ ಶರತ್‌ಚಂದ್ರ, ಕಾರ್ಯದರ್ಶಿ ಅನಿಲ್‌ಕುಮಾರ್, ಖಜಾಂಚಿ ದೀಪಕ್,…

6 hours ago

Chikkamagaluru | ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ

ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ (ಸಂತೆ ಮೈದಾನ) ಶ್ರೀ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ…

7 hours ago

ಕಾದ ಕಾವಲಿಯಂತಾದ ಮಲೆನಾಡು, ಬಿಸಿಲಿನ ಜಳಕ್ಕೆ ಜನ ಸುಸ್ತೋ ಸುಸ್ತು

ಶಿವಮೊಗ್ಗ : ಮಲೆನಾಡೆಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಕರ್ನಾಟಕ ಮಾತ್ರವಲ್ಲ ಅದರಿಂದಾಚೆಗೂ ಮಲೆನಾಡನ್ನು ಪ್ರೀತಿಸುವವರು, ಇರಲು ಇಚ್ಛಿಸುವವರು ಇದ್ದಾರೆ.…

10 hours ago