Categories: Crime NewsRipponpete

Cyber Crime | ಸೈಬರ್ ಕಳ್ಳರ ಕೈಚಳಕ ; ಮನೆ ಮಾರಿ ಹೊಂದಿಸಿಟ್ಟಿದ್ದ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ !

ರಿಪ್ಪನ್‌ಪೇಟೆ : ಕೆವೈಸಿ ಅಪ್‌ಡೇಟ್‌ ಮಾಡಬೇಕು ಎಂದು ನಂಬಿಸಿ ಒಟಿಪಿ ನಂಬರ್‌ ಪಡೆದ ಸೈಬರ್‌ ಕಳ್ಳರು 1.80 ಲಕ್ಷ ರೂಪಾಯಿ ವಂಚಿಸಿರುವ ಘಟನೆ ರಿಪ್ಪನ್‌ಪೇಟೆ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಚೌಡೇಶ್ವರಿ ಬೀದಿಯ ಸ್ವಾಮಿ (55) ವಂಚನೆಗೊಳಗಾದವರು.

ಭಾರತದಲ್ಲಿ ನೋಟ್‌ ಬ್ಯಾನ್‌ ಆದ ನಂತರ ಜನ ಡಿಜಿಟಲ್‌ ಹಣಕಾಸಿನ ವ್ಯವಹಾರದ ಕಡೆ ಮುಖ ಮಾಡಲಾಗಿತ್ತು. ಇದರಿಂದ ಜೀವನ ಒಂದು ಮಟ್ಟಕ್ಕೆ ಸುಧಾರಿಸಿತು ಎನ್ನುವಾಗಲೇ ಡಿಜಿಟಲ್‌ ಮೋಸಗಳು ಹೆಚ್ಚುತ್ತಿದ್ದು, ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ.

ಕಳೆದ ಏಪ್ರಿಲ್ 12ರ ಬುಧವಾರದಂದು ಬ್ಯಾಂಕ್‌ ಸಿಬ್ಬಂದಿ ಸೋಗಿನಲ್ಲಿ ಸ್ವಾಮಿಯವರ ಮೊಬೈಲ್‌ಗೆ ಕರೆ ಮಾಡಿದ ಅಪರಿಚಿತರು, ನಿಮ್ಮ ಬ್ಯಾಂಕ್‌ ಖಾತೆಯ ಕೆವೈಸಿ ಅಪ್‌ಡೇಟ್‌ ಮಾಡಬೇಕಿದ್ದು, ಕೆಲವು ಮಾಹಿತಿ ನೀಡಬೇಕೆಂದು ಹೇಳಿದ್ದಾರೆ. ಅದರಂತೆ ಸ್ವಾಮಿ ಅಪರಿಚಿತರು ಕೇಳಿದ ಮಾಹಿತಿ ನೀಡಿದ್ದಾರೆ. ನಂತರ ನಿಮ್ಮ ಮೊಬೈಲ್‌ಗೆ ಬಂದಿರುವ ಒಟಿಪಿ ನಂಬರ್‌ ಹೇಳುವಂತೆ ಸೂಚಿಸಿದ್ದಾರೆ. ಸ್ವಾಮಿ ನಾಲ್ಕೈದು ಬಾರಿ ಒಟಿಪಿ ನಂಬರ್‌ ಹೇಳಿದ್ದಾರೆ. ಅಷ್ಟರಲ್ಲಾಗಲೇ ಸ್ವಾಮಿ ಅವರ ಖಾತೆಯಿಂದ ವಂಚಕನ ಖಾತೆಗೆ ಕ್ರಮವಾಗಿ 98,500, 50,000 ಮತ್ತು 32,600 ರೂ. ವರ್ಗಾವಣೆ ಆಗಿದೆ.

ಇದ್ಯಾವುದರ ಅರಿವೇ ಇಲ್ಲದ ಜಿ.ಎಂ. ಸ್ವಾಮಿ ಕೆಲ ಸಮಯದ ನಂತರ ಮೊಬೈಲ್‌ಗೆ ಬಂದ ಮೆಸೇಜ್‌ ಅನ್ನು ಗಮನಿಸಿದಾಗ ಬ್ಯಾಂಕ್‌ ಖಾತೆಯಿಂದ ಹಣ ವರ್ಗಾವಣೆಯಾಗಿ ಮೋಸ ಹೋಗಿರುವ ಮಾಹಿತಿ ತಿಳಿದುಬಂದಿದೆ.

ಅಮಾಯಕ ಕೂಲಿ ಕಾರ್ಮಿಕರಾದ ಜಿ.ಎಂ. ಸ್ವಾಮಿ ಸೈಬರ್ ಕಳ್ಳರ ಕೈಚಳಕದಿಂದ ಮನೆ ಮಾರಿ ಹೊಂದಿಸಿಟ್ಟಿದ್ದ ಲಕ್ಷಾಂತರ ರೂಪಾಯಿಯನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಶಿವಮೊಗ್ಗದ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Malnad Times

Recent Posts

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

24 mins ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

9 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

19 hours ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

19 hours ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

20 hours ago

ಹಸೆಮಣೆ ಏರುವ‌ ಮುನ್ನ ಹಕ್ಕು ಚಲಾಯಿಸಿದ ವಧು

ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…

21 hours ago