ರಿಪ್ಪನ್‌ಪೇಟೆ: ಸಮೀಪದ ಮೂಗುಡ್ತಿ ಗ್ರಾಮದಲ್ಲಿ ಆಕಸ್ಮಿಕವಾಗಿ ದನದ ಕೊಟ್ಟಿಗೆಗೆ ಬೆಂಕಿ ತಗುಲಿ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಹುಲ್ಲು ಮತ್ತು ಒಣ ಅಡಿಕೆ ಬೆಂಕಿಗಾಹುತಿಯಾಗಿದೆ.
ಗ್ರಾಮದ ರೈತ ರುದ್ರಪ್ಪಗೌಡ ಅವರಿಗೆ ಸೇರಿದ ಕೊಟ್ಟಿಗೆಗೆ ಮಂಗಳವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಕೊಟ್ಟಿಗೆಯಲ್ಲಿ ಕಟ್ಟಿದ ಜಾನುವಾರುಗಳನ್ನು ಸ್ಥಳೀಯರು ಉಳಿಸುವಲ್ಲಿ ಯಶಸ್ವಿಯಾಗಿದ್ದು ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು.
ಕೊಟ್ಟಿಗೆಯಲ್ಲಿ ಸಂಗ್ರಹಿಸಿಟ್ಟ ಹುಲ್ಲುಪಿಂಡಿ ಕೆಳಭಾಗದಲ್ಲಿ 50ಕ್ಕೂ ಹೆಚ್ಚು ಅಡಿಕೆ ಸಿಪ್ಪೆಗೋಟು ಚೀಲ ಸಂಗ್ರಹಿಸಿಟ್ಟಿದ್ದರು. ಆಕಸ್ಮಿಕ ಬೆಂಕಿ ತಗುಲಿದ ಹಿನ್ನಲೆಯಲ್ಲಿ ಹುಲ್ಲುಪಿಂಡಿ, ಸಿಪ್ಪೆಗೋಟು ಅಡಿಕೆ, ಕೊಟ್ಟಿಗೆಯ ಮೇಲ್ಛಾವಣಿ ಭಾಗಶಃ ಸುಟ್ಟು ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಏಪ್ರಿಲ್ 13 ಮತ್ತು14 ರಂದು ರಿಪ್ಪನ್‌ಪೇಟೆಯಲ್ಲಿ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಪ್ರತಿಷ್ಟಾ ವರ್ಧಂತ್ಯುತ್ಸವ
ರಿಪ್ಪನ್‌ಪೇಟೆ : ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಶ್ರೀ ಆನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ 6 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಏಪ್ರಿಲ್ 13 ಮತ್ತು 14 ರಂದು ಆಯೋಜಿಸಲಾಗಿದೆ ಎಂದು ದೇವಸ್ಥಾನ ಧರ್ಮದರ್ಶಿ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 13 ರಂದು ಗುರುವಾರ ಬೆಳಗ್ಗೆ ಶಿವಮೊಗ್ಗದ ವೇದಮೂರ್ತಿ ಬ್ರಹ್ಮಶ್ರೀ ವಸಂತಭಟ್ ಇತರ ಅಗಮಿಕರ ಪರಿವಾರವನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸುವುದು ನಂತರ ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ ನಾಂದಿ ಸಮಾರಾಧನೆ ಮಹಾಸಂಕಲ್ಪ, ಋತ್ವಿಗ್ವರಣ ಷಣ್ಯಾರೀಕೇಳ ಗಣಹೋಮ ನವಗ್ರಹ ಹೋಮ ತೀರ್ಥ ಪ್ರಸಾದ ವಿನಿಯೋಗ, ಏಪ್ರಿಲ್ 14 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಶ್ರೀ ಆನ್ನಪೂರ್ಣೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಲಾವೃದ್ದಿ ಹೋಮ, ಕನಕಾಭಿಷೇಕ, ಕುಂಭಾಭಿಷೇಕ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಸಂಜೆ 6 ಗಂಟೆಗೆ ವಿಶೇಷ ಮಹಾ ರಂಗಪೂಜೆ ಶ್ರೀ ಸ್ವಾಮಿಯ ಪ್ರಾಕಾರೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಸಕಲ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಿದ್ದಿವಿನಾಯಕ ಮತ್ತು ಜಗನ್ಮಾತೆ ಆನ್ನಪೂರ್ಣೇಶ್ವರಿ ಆಮ್ಮನವರ ದರ್ಶನಾಶೀರ್ವಾದ ಪಡೆಯುವಂತೆ ದೇವಸ್ಥಾನ ಸಮಿತಿಯ ಅಧ್ಯಕ್ಷ ಈಶ್ವರಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.