Ripponpete | Arecanut | Fire | ತೋಟಕ್ಕೆ ಬೆಂಕಿ ಬಿದ್ದು 200 ಕ್ಕೂ ಹೆಚ್ಚು ಅಡಿಕೆ ಸಸಿಗಳು ನಾಶ !
ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ಬಸವಾಪುರ ಗ್ರಾಮದ ನಾಗರಾಜ ಪಿ ಎಂಬುವವರಿಗೆ ಸೇರಿದ 200 ಕ್ಕೂ ಅಧಿಕ ಅಡಿಕೆ ಸಸಿಗಳು ಬೆಂಕಿಗಾಹುತಿಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ತೋಟದಲ್ಲಿದ್ದ ಪೈಪ್ ಗಳು ಸೇರಿದಂತೆ 200 ಕ್ಕೂ ಅಧಿಕ ಅಡಿಕೆ ಸಸಿಗಳು ಸುಟ್ಟ ಕರಕಲಾಗಿದ್ದು ಅಪಾರ ನಷ್ಟ ಸಂಭವಿಸಿದೆ.
ವಿಷಯ ತಿಳಿದು ಇಂದು ಕೆರೆಹಳ್ಳಿ ಹೋಬಳಿಯ ಆರ್.ಐ ಮತ್ತು ವಿ.ಎ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ದೇವರಾಜ್ ಸೇರಿದಂತೆ ಅನೇಕರು ಇದ್ದರು.
