ಕಬ್ಬಿಣದ ವಸ್ತುಗಳ ಕಳ್ಳತನ ; ಮಾಲು ಸಮೇತ ಆರೋಪಿ ಪೊಲೀಸರ ವಶಕ್ಕೆ

0 1

ಸಾಗರ: ನಗರದ ಕೈಗಾರಿಕಾ ವಲಯದಲ್ಲಿ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಆರೋಪಿಯಿಂದ 25 ಸಾವಿರ ರೂ. ಮೌಲ್ಯದ ಕಬ್ಬಿಣದ ಸಾಮಾಗ್ರಿಗಳನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ಲಕ್ಷ ರೂ. ಮೌಲ್ಯದ ಆಟೋವನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಪಟ್ಟಣದ ಭೀಮನಕೋಣೆ ರಸ್ತೆಯ ರಾಮನಗರ ನಿವಾಸಿ ಸೈಯಾದ್ ಅಸ್ಲಂನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ.

ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ್ ಹಾಗೂ ನಗರ ಠಾಣೆ ವೃತ್ತ ನಿರೀಕ್ಷಕ ಸೀತಾರಾಮ್‌ರವರ ಮಾರ್ಗದರ್ಶನದಲ್ಲಿ ಪಿಎಸ್‌ಐಗಳಾದ ನಾಗರಾಜ ಮತ್ತು ಶ್ರೀಪತಿ ಗಿನ್ನಿ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ರತ್ನಾಕರ್, ಪ್ರಭಾಕರ್, ವಿಶ್ವನಾಥ, ಕೃಷ್ಣಮೂರ್ತಿಯವರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Leave A Reply

Your email address will not be published.

error: Content is protected !!