ಬಿಎಸ್‌ವೈ ಸಮ್ಮುಖದಲ್ಲಿ BJP ಸೇರಿದ ಕಾಗೋಡು ಪುತ್ರಿ ; ಮಗಳ ನಡೆಗೆ ಕಾಗೋಡು ತಿಮ್ಮಪ್ಪ ಏನಂದ್ರು ಗೊತ್ತಾ ?

0 0

ಸಾಗರ: ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ. ಆಕೆ ಈ ಕೆಲಸ ಮಾಡಬಾರದಿತ್ತು ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಪುತ್ರಿ ರಾಜನಂದಿನಿ ಬಿಜೆಪಿ ಸೇರಲು ಹೊರಟಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಈ ವಿಚಾರ ನನಗೆ ಗೊತ್ತಿರಲಿಲ್ಲ. ನನಗೆ ಈಗ ವಿಷಯ ಗೊತ್ತಾಯಿತು. ಅವಳು ಈ ರೀತಿ ಮಾಡುತ್ತಾಳೆ ಎಂಬುದನ್ನು ಕನಸಲ್ಲೂ ಯೋಚಿಸಿರಲಿಲ್ಲ. ಇದೆಲ್ಲ ಶಾಸಕ ಹರತಾಳು ಹಾಲಪ್ಪ ಅವರ ಕುತಂತ್ರ ಇದ್ರೂ ಇರಬಹುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಕಾಗೋಡು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ರಾಜಕಾರಣದಲ್ಲಿ ಬದ್ಧತೆ, ಸ್ಥಿರತೆ ಇಟ್ಟುಕೊಂಡು ಬೆಳೆದು ಬಂದವರು ನಾವು. ಆ ಸಂತೋಷ, ನೆಮ್ಮದಿ ನನಗೆ ಇದೆ. ಏನೇ ಆಗಲಿ ನಾನು ಕಾಂಗ್ರೆಸ್ ಬಿಟ್ಟು ಹೋಗಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ ಎಂದು ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದರು.

Leave A Reply

Your email address will not be published.

error: Content is protected !!