ಭಾರಿ ಮಳೆಗೆ ಶಾಲಾ ಕಾಂಪೌಂಡ್ ಗೋಡೆ ಕುಸಿತ !

0 1

ಸಾಗರ: ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಸಾಗರದ ನೆಹರು ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.

ಕಳೆದ ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪಾಲಕರು ಶಾಲೆಯ ದುಸ್ಥಿತಿ ಕುರಿತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಆದಾಗ್ಯೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಗುರುವಾರ ಸುರಿದ ಭಾರಿ ಮಳೆಯಿಂದಾಗಿ ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದ್ದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯ ನಗರಸಭೆ ಸದಸ್ಯ ಸೈಯದ್‌ ಜಾಕೀರ್, ಶಾಲಾಭಿವೃದ್ಧಿ ಸಮಿತಿ ರಶೀದ್‌, ಅಕ್ಬರ್ ಖಾನ್ ಆಕ್ರೋಶ ವ್ಯಕ್ತಪಡಿಸಿದರು.

Leave A Reply

Your email address will not be published.

error: Content is protected !!