Accident | ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ ; ಓರ್ವ ಸಾವು !
ಸಾಗರ : ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆಂದು ಬಂದಿದ್ದ ಪ್ರವಾಸಿಗರ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದ್ದು ಪ್ರವಾಸಿಗರಲ್ಲಿ ಓರ್ವ ಸಾವನ್ನಪ್ಪಿದ್ದಾನೆ.

ಬಸ್ಸಿನಲ್ಲಿ 25 ಕ್ಕೂ ಹೆಚ್ಚು ಜನರು ಇದ್ದರು ಎನ್ನಲಾಗುತ್ತಿದ್ದೂ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.