ನೀರಿನ ಮಟ್ಟ ಕುಸಿತ ; ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

0 62

ಸಾಗರ : ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಮುಪ್ಪಾನೆ ಲಾಂಚ್‌ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಬಂದರು ಮತ್ತು ಒಳನಾಡು ಜಾಲ ಸಾರಿಗೆ ಇಲಾಖೆ ನಿರ್ಧರಿಸಿದೆ. ಲಾಂಚ್‌ ಮತ್ತು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶರಾವತಿ ಹಿನ್ನೀರು ಭಾಗದ ಹಲ್ಕೆ – ಮುಪ್ಪಾನೆ ಲಾಂಚ್‌ ಸಂಚರಿಸುತ್ತದೆ. ಶುಕ್ರವಾರ ಲಾಂಚ್‌ಗೆ ಮರದ ದಿಮ್ಮಿಗಳು, ಮರಳಿನ ದಿಬ್ಬ ತಗುಲಿದೆ. ನೀರಿನ ಮಟ್ಟ ಕುಸಿತದಿಂದಾಗಿ ಈ ರೀತಿಯಾಗಿದೆ. ಶರಾವತಿ ಹಿನ್ನೀರು ಭಾಗದಲ್ಲಿ ಈವರೆಗಿನ ವಾಡಿಕೆ ಮಳೆಯಾಗಿಲ್ಲ. ಮುಂಗಾರು ಬಿರುಸಾದರೆ ನೀರಿನ ಮಟ್ಟ ಹೆಚ್ಚಳವಾಗಲಿದೆ. ಆಗ ಲಾಂಚ್‌ ಪುನಾರಂಭ ಮಾಡಬಹುದು.‌

ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ಕಡಿಮೆಯಾದರೆ ಮರದ ದಿಮ್ಮಿಗಳು, ಮರಳಿನ ದಿಬ್ಬಗಳು ಲಾಂಚ್‌ ಕೆಳ ಭಾಗಕ್ಕೆ ತಗುಲಲಿವೆ. ಇದರಿಂದ ಲಾಂಚ್‌ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಲಿದೆ. ಲಾಂಚ್‌ ಮತ್ತು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Leave A Reply

Your email address will not be published.

error: Content is protected !!