Categories: Sagara News

ಹಿಟ್ ಅಂಡ್ ರನ್ ; ಪಾದಚಾರಿ ಸಾವು !

ಸಾಗರ : ಆನಂದಪುರದಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.

ಶಿವಕುಮಾರ್ (56) ಮೃತ ದುರ್ದೈವಿ. ಪೊಲೀಸರು ಹಿಟ್ ಅಂಡ್ ರನ್‌ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಶಿವಕುಮಾರ್‌ ಅವರು ಆನಂದಪುರದಿಂದ ಹೊರಟು ಯಡಹಳ್ಳಿಯ ಪೆಟ್ರೋಲ್ ಬಂಕ್‌ನಿಂದ ಸ್ವಲ್ಪವೇ ದೂರದಲ್ಲಿದ್ದ ತಮ್ಮ ಮನೆಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಶಿವಕುಮಾರ್‌ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು ಗಾಯಗೊಂಡಿದ್ದ ಶಿವಕುಮಾರ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆ ನಡೆದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

2 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

4 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

5 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

10 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

11 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago