Mobile Towers | ಡಿಸೆಂಬರ್ ಮುಕ್ತಾಯಕ್ಕೆ 35 ಮೊಬೈಲ್ ಟವರ್ ನಿರ್ಮಾಣ ; ಬಿವೈಆರ್

0 43

ಸಾಗರ: ಮಲೆನಾಡಿನ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು ಶರಾವತಿ ಹಿನ್ನೀರಿನ ಪ್ರದೇಶಕ್ಕೆ ಆದ್ಯತೆ ನೀಡಿ ಡಿಸೆಂಬರ್ ಮುಕ್ತಾಯಕ್ಕೆ 35 ಮೊಬೈಲ್ ಟವರ್ ನಿರ್ಮಾಣ ಮಾಡುವುದಾಗಿ ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ,

ಅವರು ಎಸ್ಎಸ್ ಬೋಗ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೊಪ್ಪದಲ್ಲಿ ವಿಕಾಸ ತೀರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬಿಎಸ್ಎನ್ಎಲ್ ಸಮಸ್ಯೆ ಇತ್ಯರ್ಥಕ್ಕೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಮಾಡಿದ್ದೇನೆ. ತಮ್ಮ ಗುಣಮಟ್ಟದ ನೆಟ್‌ವರ್ಕ್ ನೀಡಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು, ಮತ್ತು ರಾಜ್ಯದಲ್ಲಿ ವಿಶೇಷವಾಗಿ ಸಾಗರ ಮತ್ತು ಹೊಸನಗರ ಭಾಗಕ್ಕೆ ಹೆಚ್ಚಿನ ಬಿಎಸ್ಎನ್ಎಲ್ ಟವರ್ ಮಂಜೂರಾತಿ ಮಾಡಲಾಗಿದೆ‌ ಎಂದರು.

ರೈತರ ಬೆಳೆ ವಿಮೆ ವಿಚಾರವಾಗಿ ಮಾತನಾಡಿ, ಮೂರು ವರ್ಷಕ್ಕೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಬೆಳೆ ವಿಮಾ ಕಂಪನಿಗಳಿಂದ ಟೆಂಡರ್ ಕರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಹೊಸ ಟೆಂಡರ್ ಪ್ರಕ್ರಿಯೆ ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು ತಿಂಗಳ ಒಳಗೆ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದರು.

ಜಿಲ್ಲೆಯಲ್ಲಿ 5 ರೈಲ್ವೆ ನಿಲ್ದಾಣಕ್ಕೆ 100 ಕೋಟಿ ರೂ. ಅನುದಾನ ಮಂಜೂರಾಗಿದ್ದು. ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣ ಅಭಿವೃದ್ಧಿಪಡಿಸಲಾಗಿದೆ. ಇಲ್ಲಿ ರೈಲು ನಿಲುಗಡಿಗೆ ಈಗಾಗಲೇ ಮನವಿ ಬಂದಿದ್ದು ಇದರ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಜೋಗ ಅಭಿವೃದ್ಧಿ ಕಾಮಗಾರಿ ಕೂಡ ನಡೆಯುತ್ತಿದೆ. ಸಿಗಂದೂರು ಸೇತುವೆ ಕಾಮಗಾರಿ ಮುಂದಿನ ಜುಲೈ ವೇಳೆಗೆ ಮುಗಿಯಬೇಕಾಗಿತ್ತು. ಆದರೆ ನಮ್ಮ ಮನವಿಗೆ ಸ್ಪಂದಿಸಿರುವ ಗುತ್ತಿಗೆದಾರರು 2024 ರ ಜನವರಿ ಇಲ್ಲವೇ ಫೆಬ್ರವರಿ ವೇಳೆಗೆ ಕಾಮಗಾರಿ ಮುಗಿಸಿಕೊಡುವ ಭರವಸೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಉಪ ವಿಭಾಗ ಅಧಿಕಾರಿಗಳು, ಡಿಎಫ್ಓ, ಬಿಎಸ್ಎನ್ಎಲ್ ಅಧಿಕಾರಿಗಳು, ಅರಣ್ಯ ಅಧಿಕಾರಿಗಳು ಸೇರಿದಂತೆ ಮಾಜಿ ಶಾಸಕ ಹರತಾಳು ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ ಮೇಘರಾಜ್, ಪ್ರಸನ್ನ ಕೆರೆಕೈ ಸೇರಿದಂತೆ ಪ್ರಮುಖರು ಇದ್ದರು.

Leave A Reply

Your email address will not be published.

error: Content is protected !!