ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ; ಆರೋಪಿ ಅರೆಸ್ಟ್

0 26

ಶಿಕಾರಿಪುರ : ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಮಾಡಿರುವ ಘಟನೆ ನಡೆದಿದ್ದು ಈ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಶಿಕಾರಿಪುರದ ಅಜಮತ್ತುಲ್ಲಾ. ಎಂ @ ಇಬ್ಬು (23) ಬಂಧಿತ ಆರೋಪಿಯಾಗಿದ್ದು, ಇನ್ನು ನೊಂದ ಬಾಲಕಿ ಆರೋಗ್ಯದಲ್ಲಿ ಏರುಪೇರಾದಾಗ ಪೋಷಕರು ವೈದ್ಯರ ಬಳಿಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ತಪಾಸಣೆ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ದೃಢಪಟ್ಟಿದೆ.

ಇನ್ನೂ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಪೊಲೀಸ್ ಠಾಣೆಗೆ ತೆರಳಿ ಇತ ಕಳೆದ ಒಂದು ವರ್ಷದಿಂದ ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ದೂರು ನೀಡಿದ್ದಾರೆ.

ಈ ಕುರಿತು ಶಿರಾಳಕೊಪ್ಪ ಠಾಣೆಯಲ್ಲಿ ಐಪಿಸಿ 376, ಪೋಕ್ಸೋ ಹಾಗೂ ಎಸ್ಸಿ-ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಇದೀಗ ಆರೋಪಿಯನ್ನು ಶಿರಾಳಕೊಪ್ಪ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Leave A Reply

Your email address will not be published.

error: Content is protected !!