Categories: Shikaripura

ಅಕ್ರಮ ಕಳಭಟ್ಟಿ ಸಾರಾಯಿ ಮತ್ತು ಬೆಲ್ಲದ ಕೊಳೆ ವಶಕ್ಕೆ !

ಶಿಕಾರಿಪುರ : ರಾಜ್ಯ ವಿಧಾನಸಭಾ ಚುನಾವಣೆ 2023 ರ  ಮುನ್ನೆಚ್ಚರಿಕೆ ಕ್ರಮವಾಗಿ ಅಬಕಾರಿ ಅಕ್ರಮಗಳನ್ನು  ತಡೆಗಟ್ಟುವ ನಿಟ್ಟಿನಲ್ಲಿ, ಕ್ಯಾಪ್ಟನ್ ಅಜಿತ್ ಕುಮಾರ್ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ರವರ ನಿರ್ದೇಶನದಂತೆ ಹಾಗೂ ಶಿವಪ್ರಸಾದ್ ಸಿ  ಉಪ ಅಧೀಕ್ಷಕರು ಸಾಗರ ಉಪ ವಿಭಾಗ, ಸಾಗರ ಇವರ ಮಾರ್ಗದರ್ಶನದಲ್ಲಿ ಶಿಕಾರಿಪುರ ವಲಯದ ಅಬಕಾರಿ ನಿರೀಕ್ಷಕರಾದ ರಮೇಶ ಕೆ. ಹೆಚ್ ರವರು ಸಿಬ್ಬಂದಿಗಳೊಂದಿಗೆ ಮಂಗಳವಾರದಂದು ಸಂಜೆ ವೇಳೆಗೆ ತಾಲ್ಲೂಕಿನ ಮಳವಳ್ಳಿ ತಾಂಡಾದಲ್ಲಿ ಅಬಕಾರಿ ದಾಳಿ ನಡೆಸಿ, ಟೋಪಿಯನಾಯ್ಕ ಬಿನ್ ಪೀತ್ಯನಾಯ್ಕ ಎಂಬುವವರ ವಾಸದ  ಮನೆಯಲ್ಲಿ 01 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ 30 ಲೀಟರ್ ಬೆಲ್ಲದ ಕೊಳೆಯನ್ನು ವಶಪಡಿಸಿಕೊಂಡು ಅಬಕಾರಿ ಕಾಯ್ದೆ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ದಾಳಿಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಚಂದ್ರಪ್ಪ ಎಸ್. ಡಿ, ಸಿಬ್ಬಂದಿಗಳಾದ ಸಂತೋಷ್, ಮಂಜುನಾಥ್, ಹನುಮಂತಪ್ಪ ಹಾಗೂ ಕನಕಪ್ಪ ಭಾಗವಹಿಸಿದ್ದರು.

Malnad Times

Recent Posts

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

33 mins ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

2 hours ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

5 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

9 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

22 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

1 day ago