ಜೂ. 9ರಂದು ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ
36 ಅಡಿ ಎತ್ತರದ ರೇಣುಕಾಚಾರ್ಯ ಮೂರ್ತಿ ನಿರ್ಮಾಣ ಕಾರ್ಯದ ಚಾಲನಾ ಸಮಾರಂಭ

0 51

ಶಿಕಾರಿಪುರ : ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ದಿವ್ಯ ಸಾನ್ನಿಧ್ಯದಲ್ಲಿ ದಿನಾಂಕ 9-6-2023 ಶುಕ್ರವಾರದಂದು ತಪೋಕ್ಷೇತ್ರ ಕಡೇನಂದಿಹಳ್ಳಿ ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ಬೃಹಸ್ಪತಿ ಹೋಮ, ಶಿವಾನುಷ್ಠಾನ ಮಂದಿರ ಶಿಲಾಮಂಟಪದ ಮೇಲೆ 36 ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯ ಮೂರ್ತಿ ನಿರ್ಮಾಣ ಕಾರ್ಯ ಚಾಲನಾ ಸಮಾರಂಭವನ್ನು ಏರ್ಪಡಿಸಲಾಗಿದೆ. ಪ್ರಾತಃಕಾಲದಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರು ಇಷ್ಟಲಿಂಗ ಪೂಜೆ ನಡೆಸುವರು.


ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಧರ್ಮ ಸಮಾರಂಭ ಉದ್ಘಾಟಿಸಿ ಮೂರ್ತಿ ನಿರ್ಮಾಣಕ್ಕೆ ಚಾಲನೆ ನೀಡುವರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ವೈ.ವಿಜಯೇಂದ್ರ, ಯು.ಬಿ.ಬಣಕಾರ ಇವರಿಗೆ ಗೌರವ ಗುರುರಕ್ಷೆ ನೀಡಲಾಗುವುದು. ಮುಖ್ಯ ಅತಿಥಿಗಳಾಗಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಹಾಗೂ ಜಿಲ್ಲಾ ಪಂಚಾಯತ್ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರುಗಳು ಹಾಗೂ ರಾಜಕೀಯ ಧುರೀಣರು ಪಾಲ್ಗೊಳ್ಳುವರು. ದುಗ್ಲಿ-ಕಡೇನಂದಿಹಳ್ಳಿ ಕ್ಷೇತ್ರದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದು, ಕನ್ನೂರು-ಸಿಂಧನೂರು ಗುರುಮಠದ ಸೋಮನಾಥ ಶಿವಾಚಾರ್ಯ ಸ್ವಾಮಿಗಳು, ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯ ಸ್ವಾಮಿಗಳು, ಚನ್ನಗಿರಿಯ ಕೇದಾರ ಶಿವಶಾಂತವೀರ ಶಿವಾಚಾರ್ಯ ಸ್ವಾಮಿಗಳು, ಸಿಗಂಧೂರು ಕ್ಷೇತ್ರದ ಧರ್ಮದರ್ಶಿ ಡಾ.ರಾಮಪ್ಪ, ನೀಲಗೋಡು ಯಕ್ಷಿ ಚೌಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಮಾದೇವ ಸ್ವಾಮಿ, ಹಾರನಹಳ್ಳಿ ಶ್ರೀ ಶನೈಶ್ವರಸ್ವಾಮಿ ಕ್ಷೇತ್ರದ ಧರ್ಮದರ್ಶಿ ಹನುಮಂತಪ್ಪ ಸ್ವಾಮಿಗಳು ಉಪಸ್ಥಿತರಿರುವರು.


ಶ್ರೀ ಗುರು ರೇವಣಸಿದ್ಧೇಶ್ವರ ಜನಕಲ್ಯಾಣ ಟ್ರಸ್ಟ್ ಸಲಹಾ ಮತ್ತು ಸೇವಾ ಸಮಿತಿ, ಶ್ರೀ ಗುರು ರೇವಣಸಿದ್ಧೇಶ್ವರ ಯುವಕ ಮಂಡಳಿ ಪದಾಧಿಕಾರಿಗಳು, ಕಡೇನಂದಿಹಳ್ಳಿ-ದುಗ್ಲಿ ಮತ್ತು ಸುತ್ತಲಿನ ಗ್ರಾಮಗಳ ಸದ್ಭಕ್ತರುಗಳು ಸಮಾರಂಭಕ್ಕೆ ಸಹಕಾರ ನೀಡಲಿರುವರು. ಶ್ರೀ ಮಠದ ಪುರೋಹಿತ ಬಳಗದಿವರಿಂದ ವೈದಿಕ ಸೇವೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಮಠದ ಪ್ರಕಟಣೆ ತಿಳಿಸಿದೆ.

Leave A Reply

Your email address will not be published.

error: Content is protected !!