Categories: Shikaripura

ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಿ ; ಸಂಸದ ಬಿ.ವೈ ರಾಘವೇಂದ್ರ

ಶಿಕಾರಿಪುರ : ದೀನ ದಲಿತರ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದಿಂದ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅಲ್ಲದೇ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಇದರ ‌ಸದುಪಯೋಗ ಪಡೆದುಕೊಳ್ಳಲು ಜಿಲ್ಲೆಯ ಸಂಸದರಾದ ಬಿ ವೈ ರಾಘವೇಂದ್ರರವರು ಕರೆನೀಡಿದರು.

ಮಂಗಳವಾರದಂದು ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ, ಸಮಾಜ ಕಲ್ಯಾಣ ಇಲಾಖೆಯಡಿ ಡಾ, ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬುವಂತ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮಗಳ ಸಂಯುಕ್ತಾಶ್ರಯದಲ್ಲಿ ಡಾ ಬಾಬು ಜಗಜೀವನ್ ರಾಮ್ ದ್ವಿಚಕ್ರ ವಾಹನಗಳ ವಿತರಣಾ ಹಾಗೂ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ವಿರೋಧಪಕ್ಷಗಳು ಗ್ಯಾರಂಟಿ ಕಾರ್ಡ್ ಎಂಬ ಪ್ರಣಾಳಿಕೆ ಮೂಲಕ ಜನತೆಗೆ ಸುಳ್ಳು ಭರವಸೆಗಳನ್ನು ನೀಡುವುದರ ಮೂಲಕ ತಪ್ಪು ಸಂದೇಶ ಸಾರುವ ಕೆಲಸ ಮಾಡಲಾಗುತ್ತಿದೆ. ಸ್ವಾತಂತ್ರ್ಯ ನಂತರ ಎಪ್ಪತ್ತು ವರ್ಷಗಳ ಕಾಲ ಆಡಳಿತ ಯಂತ್ರ ಹಿಡಿದು ದೇಶದ ಜನತೆಗೆ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡಲಿಲ್ಲ. ಆದರೀಗ ಸುಳ್ಳು ಭರವಸೆಗಳನ್ನು  ನೀಡಿ ಮತದಾರರಿಗೆ ಓಲೈಸುವ ಪ್ರಯತ್ನವಾಗಿದ್ದು, ಇದರಿಂದ ಮತದಾರರು ಎಚ್ಚೆತ್ತುಕೊಳ್ಳಬೇಕಲ್ಲದೇ ಇಂದು ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು. 

ಬಿ ಎಸ್ ಯಡಿಯೂರಪ್ಪರವರು ಮುಖ್ಯಮಂತ್ರಿಯಾಗಿದ್ದಾಗ ಶಿಕಾರಿಪುರ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಲ್ಲದೇ ರಾಜ್ಯದ ದೀನ ದಲಿತರ ಅಭಿವೃದ್ಧಿಗೂ ಕಾರಣೀಕರ್ತರಾಗಿದ್ದಾರೆ. ವಿವಿಧ ನಿಗಮದ ಯೋಜನೆಗಳ ಅಡಿಯಲ್ಲಿ ನೀಡಲಾಗುತ್ತಿರುವ ಈ ಯೋಜನೆ ಸರ್ಕಾರದಿಂದ ಐವತ್ತು ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು ಫಲಾನುಭವಿಗಳು ಇಪ್ಪತ್ತು ಸಾವಿರ ರೂಪಾಯಿಗಳನ್ನು ಬ್ಯಾಂಕ್ ಮೂಲಕ ಬಡ್ಡಿ ರಹಿತ ಸಾಲ ನೀಡಲಾಗುವುದು. ಇದರಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ. ಇಂತಹ ಯೋಜನೆಗಳಿಗೆ ಮಧ್ಯವರ್ತಿಗಳ ಹಾವಳಿಗೆ ಫಲಾನುಭವಿಗಳು ತುತ್ತಾಗದೇ ನೇರವಾಗಿ ಇಲಾಖೆಗೆ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಆಯಾಯಾ ಇಲಾಖೆಯ ಅಧಿಕಾರಿಗಳಿಂದ ಆಯ್ಕೆ ಮಾಡಿದ್ದಕ್ಕೆ ಲಂಚದ ಆಮಿಷ ಒಡ್ಡಿದ್ದರೆ ನೇರವಾಗಿ ನಮ್ಮನ್ನು ಸಂಪರ್ಕಿಸಿ ಮಾಹಿತಿ ನೀಡಿದರೆ ಅಂತಹ ಅಧಿಕಾರಿಗಳ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ನಮ್ಮ ತಾಲ್ಲೂಕಿನ ಅಧಿಕಾರಿಗಳು ಒಳ್ಳೆಯವರು ಎಂದು ಅಧಿಕಾರಿಗಳಿಗೆ ಕೊಂಡಾಡಿದ ಅವರು, ಉದ್ಯಮ ಸಹಾಯಕ್ಕೆ ಸರ್ಕಾರದ ಎರಡು ಲಕ್ಷ ರೂಪಾಯಿ ಸಹಾಯಧನ ಬ್ಯಾಂಕ್ ಮೂಲಕ ಒಂದು ಲಕ್ಷ ರೂಪಾಯಿ ಸಾಲ ನೀಡಲಾಗುವುದು. ಈ ಯೋಜನೆಗಾಗಿ ಒಂದು ಸಾವಿರ ಅರ್ಜಿ ಸಲ್ಲಿಸಲಾಗಿದ್ದು, ಇವುಗಳಲ್ಲಿ ಅರವತ್ತು ಜನರಿಗೆ ಮಾತ್ರ ಸೌಲಭ್ಯ ನೀಡಲಾಗುತ್ತಿದ್ದು, ಉಳಿದ ಅರ್ಜಿದಾರರಿಗೆ ಬೇಸರವಾಗುತ್ತದೆ ಇವರಿಗೆ ನಾವು ಉತ್ತರ ನೀಡುವುದು ಕಷ್ಟವಾಗಿದೆ ಅವರನ್ನು ನಿಷ್ಠುರ ಮಾಡಿಕೊಂಡು ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಂಎಡಿಬಿ ಅಧ್ಯಕ್ಷ ಕೆ ಎಸ್ ಗುರುಮೂರ್ತಿ ಮಾತನಾಡಿ, ಬ್ಯಾಂಕ್ ಮೂಲಕ ಇಪ್ಪತ್ತು ಸಾವಿರ ರೂಪಾಯಿಗಳ ಸಾಲ ಪಡೆದ ಫಲಾನುಭವಿಗಳು ಬಡ್ಡಿ ಸಮೇತ ಒಟ್ಟು ಇಪ್ಪತ್ನಾಲ್ಕು ಸಾವಿರ ರೂಪಾಯಿ ಕಟ್ಟಬೇಕಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಗ್ಯಾರಂಟಿ ಕಾರ್ಡ್ ನೀಡಲಾಗುತ್ತಿದೆ ಇದರ ಬಗ್ಗೆ ಗಮನ ನೀಡದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ನೀಡಲಾಗುತ್ತಿರುವ ಇಂತಹಾ ಯೋಜನೆಗಳನ್ನು ಪಡೆದ ನೀವು ಮುಂದಿನ ದಿನಗಳಲ್ಲಿ ಚಿಂತನೆ ನಡೆಸಬೇಕಿದೆ. ಬಗರ್ ಹುಕುಂ ರೈತರಿಗೆ ಹಕ್ಕು ಪತ್ರಗಳನ್ನು ಕೊಡಿಸಿದವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸ್ವಾವಲಂಬಿ ಜೀವನ ನಡೆಸಲು ಸಹಾಯ ಮಾಡಿದವರು ಬಿಜೆಪಿ ಪಕ್ಷದವರು ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರು ಎಂದು ಚುನಾವಣಾ ಪೂರ್ವ ತಯಾರಿ ಹಾಗೂ ಪ್ರಚಾರವನ್ನು ಮಾಡಿ ಈ ವೇದಿಕೆಯ ಮೂಲಕ ಫಲಾನುಭವಿಗಳಿಗೆ ಮತದಾನ ಮಾಡಲು ಸೂಚನೆ ನೀಡಿದರು. 

ವೇದಿಕೆಯಲ್ಲಿ ಪುರಸಭಾ ಅಧ್ಯಕ್ಷೆ ರೇಖಾಬಾಯಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೆ ರೇವಣಪ್ಪ, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪರಮೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 

ವೇದಿಕೆಯಲ್ಲಿ ವಿವಿಧ ಫಲಾನುಭವಿಗಳಿಗೆ ಚೆಕ್ ಹಾಗೂ ಬೈಕ್ ವಿತರಣೆ ಮಾಡಲಾಯಿತು.

“ಚುನಾವಣಾ ಪೂರ್ವ ತಯಾರಿಯಾಗಿದ್ದ ಈ ವೇದಿಕೆಯಲ್ಲಿ ಕಾರ್ಯಕ್ರಮದ ಉದ್ಘಾಟನೆಯು, ಜ್ಯೋತಿ ಬೆಳಗಿಸುವ ಮೂಲಕ ಅಥವಾ ಗಿಡಕ್ಕೆ ನೀರು ಹಾಕುವ ಮೂಲಕ ಆರಂಭವಾಗಬೇಕಿದ್ದ ಕಾರ್ಯಕ್ರಮ ವೇದಿಕೆಯ ಎದುರು ಗಿಡವಿದ್ದ ಪಾಟ್ ಇದ್ದರೂ ಈ ಬಗ್ಗೆ ಚಿಂತನೆ ನಡೆಸದೇ ನೇರವಾಗಿ ಸಂಸದರು ಮೈಕ್ ಹಿಡಿದು ಮಾತನಾಡಲು ಆರಂಭಿಸಿದರು. ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದ ಅಧಿಕಾರಿಗಳಿಗೂ ಹಾಗೂ ಸೌಲಭ್ಯವನ್ನು ವಿತರಿಸಲು ಆಗಮಿಸಿದ ಚುನಾಯಿತ ಜನಪ್ರತಿನಿಧಿಗಳಿಗೂ ಸರ್ಕಾರದ ಯೋಜನೆಗಳ ಕುರಿತ ಮಾಹಿತಿ ಕೊರತೆಯ ಎದ್ದು ಕಾಣುತ್ತಿತ್ತು. ದ್ವಿಚಕ್ರ ವಾಹನಗಳ ವಿತರಣೆಯ ಸಂದರ್ಭದಲ್ಲಿ ಸರ್ಕಾರದಿಂದ 50 ಸಾವಿರ ರೂಪಾಯಿ ಸಹಾಯಧನ ಬ್ಯಾಂಕ್ ಮೂಲಕ ಸಾಲ ನೀಡಲಾಗುವುದು ಎಂಬುದಾಗಿ ತಿಳಿಸಿದ ಸಂಸದರಾದ ಬಿ.ವೈ ರಾಘವೇಂದ್ರರವರು, ಈ ಯೋಜನೆಗೆ ಬ್ಯಾಂಕ್ ಮೂಲಕ ಸಾಲ ನೀಡಲು ಫಲಾನುಭವಿಗಳು ಬಡ್ಡಿ ಎಷ್ಟು ಕಟ್ಟಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಕೇಳಿದರೆ ಅಧಿಕಾರಿಗಳು ಒಂದು ಬಾರಿ ಶೇಕಡಾ 6 ಪರ್ಸೆಂಟ್ ಎಂದು ಒಂದೊಮ್ಮೆ ಶೇಕಡಾ 3 ಪರ್ಸೆಂಟ್ ಎಂದು ಮತ್ತೊಮ್ಮೆ ಬಡ್ಡಿ ರಹಿತ ಸಾಲ ಎಂದು ಸಂಸದರಿಗೂ, ಸೌಲಭ್ಯ ಪಡೆಯಲು ಆಗಮಿಸಿದ ಫಲಾನುಭವಿಗಳಿಗೂ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇದಕ್ಕೆ ಎಂಎಡಿಬಿ ಅಧ್ಯಕ್ಷ ಕೆ ಎಸ್ ಗುರುಮೂರ್ತಿ ಸ್ಪಷ್ಟೀಕರಣ ನೀಡಿ ಫಲಾನುಭವಿಗಳು 20 ಸಾವಿರ ರೂಪಾಯಿಗಳಿಗೆ ಬಡ್ಡಿ ಸಮೇತ ಒಟ್ಟು 24 ಸಾವಿರ ರೂಪಾಯಿ ಕಟ್ಟಬೇಕಾಗುತ್ತದೆ ಎಂದು ತಿಳಿಸಿದರು.”

Malnad Times

Recent Posts

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

6 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

16 hours ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

16 hours ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

17 hours ago

ಹಸೆಮಣೆ ಏರುವ‌ ಮುನ್ನ ಹಕ್ಕು ಚಲಾಯಿಸಿದ ವಧು

ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…

18 hours ago

ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ !

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಚಿಕ್ಕಮಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು…

18 hours ago