Categories: Shikaripura

130 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ; ಬಿ.ವೈ ವಿಜಯೇಂದ್ರ

ಶಿಕಾರಿಪುರ : ದೇಶದ ಅಭಿವೃದ್ಧಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ರಾಜ್ಯದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರು ಮತ್ತು ಬಸವರಾಜ್ ಬೊಮ್ಮಾಯಿರವರು ಜನತೆಗೆ ನೀಡಿದ ಉತ್ತಮ ಕಾರ್ಯಕ್ರಮದಡಿ ರಾಜ್ಯದಲ್ಲಿ ಮತ್ತೆ ಈ ಬಾರಿ ಬಿಜೆಪಿ ಪಕ್ಷವು 130 ಕ್ಕೂ ಅದಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಅದಿಕಾರ ಹಿಡಿಯಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಶಿಕಾರಿಪುರ ಅಭ್ಯರ್ಥಿ ಬಿ.ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಪಟ್ಟಣದ ಮಾಳೇರ ಕೇರಿಯಲ್ಲಿರುವ ಪಕ್ಷದ ಕಛೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ 1200 ಮಹಾಶಕ್ತಿ ಕೇಂದ್ರಗಳಲ್ಲಿ ಅಭಿಯಾನದ ಜೊತೆಗೆ ರ್ಯಾಲಿ ಹಾಗೂ ಮಹಾಸಭೆ ನಡೆಸಿ, ಕನಿಷ್ಟ 2000 ಮತದಾರರನ್ನು ಭೇಟಿ ಮಾಡಿ ಅವರ ಜೊತೆ ಮಾತನಾಡುವುದಲ್ಲದೇ, ಅಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಪರಿಹರ ಸೂಚಿಸುವ ಭರವಸೆ ನೀಡಲಾಗಿದೆ. ಅಲ್ಲದೇ ಏ. 25 ಮತ್ತು 26 ರಂದು ಶಕ್ತಿ ಕೇಂದ್ರದಲ್ಲಿ ಅಭಿಯಾನ ನಡೆಸಲಾಗುತ್ತಿದ್ದು, ಅದೇರೀತಿ  ರಾಜ್ಯದಾದ್ಯಂತ ಬಿಜೆಪಿ ಫಕ್ಷದಿಂದ 25 ಲಕ್ಷಕ್ಕೂ ಅಧಿಕ ಮತದಾರರನ್ನು ಭೇಟಿಮಾಡುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. 

ಮಂಗಳವಾರ ತಾಲ್ಲೂಕಿನ ಅಂಜನಾಪುರ ಹಾಗೂ ಹೊಸೂರು ಶಕ್ತಿ ಕೇಂದ್ರದಲ್ಲಿ ಮಹಾಸಭೆ ನಡೆಸಲಾಗಿದೆ. ಇಲ್ಲಿ ಅಭೂತಪೂರ್ವವಾದ ಜನಸಂಖೆ ಸೇರಿದ್ದರು. ಇಂದು ಕಸಬಾ, ಅಂಬಾರಗೊಪ್ಪ, ಕಪ್ಪನಹಳ್ಳಿ ಶಕ್ತಿ ಕೇಂದ್ರದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ವಿಧಾನಸಭಾ ಚುನಾವಣೆ ಪೋಷಣೆಯಾಗುತ್ತಿದ್ದಂತೆ ತಾಲ್ಲೂಕಿನಲ್ಲಿ ಸಂಸದರಾದ ಬಿ ವೈ ರಾಘವೇಂದ್ರ ಹಿರಿಯರಾದ ಗುರುಮೂರ್ತಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್ ಸೇರಿದಂತೆ ಪಕ್ಷದ ಅನೇಕ ಕಾರ್ಯಕರ್ತರು ಈಗಾಗಲೇ ಎರಡು ಹಂತದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದು, ಗುರುವಾರದಂದು ರಾಷ್ಟ್ರೀಯ ಅದ್ಯಕ್ಷ ಜೆ ಪಿ ನಡ್ಡಾರವರು ಶಿರಾಳಕೊಪ್ಪಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11:00 ಗಂಟೆಗೆ  ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಬೃಹತ್ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ನಾನು 20 ದಿನ ಕ್ಷೇತ್ರದಲ್ಲಿ ಇರುತ್ತೇನೆ. ಜನ ಸಂಪರ್ಕ ನಡೆಸಿ ಅವರ ಸಮಸ್ಯೆಗಳಿಗೆ ಸ್ಪಂದನೆ ಮಾಡುತ್ತೆನೆ. ಈಗಾಗಲೇ ತಾಲ್ಲೂಕಿನ ಸಂಡ ಗ್ರಾಮದಲ್ಲಿ 150 ಎಕರೆಗೂ ಅಧಿಕ ಜಾಗದಲ್ಲಿ ಪಶು ಆಹಾರ ಘಟಕದ ಕಾರ್ಖಾನೆ ನಿರ್ಮಾಣವಾಗಿದ್ದು, ಅದೇರೀತಿ ಶಿವಮೊಗ್ಗ ರಸ್ತೆಯಲ್ಲಿ ಶಾಹಿ ಗಾರ್ಮೆಂಟ್ ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಖಾನೆ ತಂದು ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಲು ಶ್ರಮಿಸುತ್ತೇನೆ. ತಾಲ್ಲೂಕಿನಾದ್ಯಂತ ಅತಿ ಹೆಚ್ಚು ಕೊಳವೆ ಬಾವಿಗಳಿದ್ದು, ಇವುಗಳಿಗೆ. ಇನ್ನೂ ಹೆಚ್ಚು ವಿದ್ಯುತ್ ಸ್ಥಾವರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಬಗರ್ ಹುಕುಂ ಸಾಗುವಳಿದಾರರಿಗೆ ಬಿ.ಎಸ್.ವೈ ರೀತಿ ಬದ್ದತೆ ಇಟ್ಟುಕೊಂಡು ಕೆಲಸ ಮಾಡುತ್ತೆನೆ. ಒಕ್ಕಲೆಬ್ಬಿಸಲು ಬಿಡುವುದಿಲ್ಲ 

ತಾಲ್ಲೂಕಿನಲ್ಲಿ ಕಳೆದ ನಲವತ್ತು ವರ್ಷಗಳ ಕಾಲ ಶಾಸಕರಾಗಿ ವಿರೋಧ ಪಕ್ಷದ ನಾಯಕರಾಗಿ ನಾಲ್ಕು ಬಾರಿ ರಾಜ್ಯದ  ಮುಖ್ಯಮಂತ್ರಿಯಾಗಿ ಸೇವೆಸಲ್ಲಿಸಿದ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರ ಹಾಗೂ ಸಂಸದರಾದ ಬಿ ವೈ ರಾಘವೇಂದ್ರರವರು ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿ ಅವರ  ಪರಿಶ್ರಮದ ಫಲವಾಗಿ, ಕೇಂದ್ರದಲ್ಲಿ ನರೇಂದ್ರ ಮೋದಿಯವರ ಉತ್ತಮ ಆಡಳಿತದ ಪಲವಾಗಿ ನಾನು ಈ ಕ್ಷೇತ್ರದಲ್ಲಿ ಐವತ್ತು ಸಾವಿರಕ್ಕಿಂತಲೂ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸುತ್ತೇನಲ್ಲದೇ, ರಾಜ್ಯದಲ್ಲಿ 130 ಕ್ಕೂ ಅಧಿಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು  ಸಾಧಿಸಿ ನಿಚ್ಚಳ ಬಹುಮತದಿಂದ ಅಧಿಕಾರ ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು .

ಉತ್ತರಾಖಂಡ್ ನ ಮಾಜಿ ಸಚಿವ ಹಾಲಿ ಶಾಸಕ ಖಜಾನ್ ದಾಸ್ ಮಾತನಾಡಿ, ನಾನು ಶಿಕಾರಿಪುರ ತಾಲ್ಲೂಕಿನಲ್ಲಿ ಚುನಾವಣೆಯ ವೀಕ್ಷನಾಗಿ ಇದೇ ತಿಂಗಳ 18 ರಂದು ಇಲ್ಲಿಗೆ ಆಗಮಿಸಿದ್ದು, ಇಲ್ಲಿ  ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಹಾಗೂ ಜಿಲ್ಲೆಯ ಸಂಸದ ಬಿ ವೈ ರಾಘವೇಂದ್ರರವರ ಅಭಿವೃದ್ಧಿ ಕಾರ್ಯಕ್ಕೆ ಇಲ್ಲಿನ ಜನತೆ ಸಂತೃಪ್ತರಾಗಿದ್ದಾರೆ. ತಾಲ್ಲೂಕಿನಲ್ಲಿ ಯಾವುದೇ ಗ್ರಾಮಗಳಿಗೆ ಮತಯಾಚನೆಗೆ ಹೋದರೆ ಅಭೂತಪೂರ್ವವಾಗಿ ಜನರು ಸೇರುತ್ತಾರಲ್ಲದೇ, ಮೆರವಣಿಗೆಯಲ್ಲಿ ಹರ್ಷಿತರಾಗಿ ಕುಣಿದು ಕುಪ್ಪಳಿಸುತ್ತಿದ್ದರೆ ಅವರ ಜೊತಗೆ ನನಗೂ ಸಹ ಕುಣೀಯುವ ಆಸೆಯಾಗುತ್ತಿತ್ತು.  ರಾಜ್ಯದ ಜನತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಉತ್ತಮ ಆಡಳಿತವನ್ನು ಗಮನಿಸಿ ಅವರನ್ನು ಒಪ್ಪಿಕೊಂಡಿದ್ದು, ರಾಜ್ಯದಲ್ಲಿ ಅತಿ ಹೆಚ್ಚಿನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ತಾಲ್ಲೂಕಿನಲ್ಲಿ ಬಿಜೆಪಿ ಪಕ್ಷದ ವಿಜಯೇಂದ್ರ ರವರಿಗೂ ಹೆಚ್ಚಿನ ಒಲವಿದ್ದು, ಅವರು ಇಲ್ಲಿ ಅತಿಹೆಚ್ಚಿನ ಮತಗಳಿಂದ ಜಯಗಳಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಎಂಎಡಿಬಿ ಅಧ್ಯಕ್ಷ ಕೆ ಎಸ್ ಗುರುಮೂರ್ತಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಬಿಜೆಪಿ ಮುಖಂಡರಾದ ಕಬಾಡಿ ರಾಜು, ಕೆ ಹಾಲಪ್ಪ, ಟಿ ಎಸ್ ಮೋಹನ್. ಚೆನ್ನವೀರಪ್ಪ, ರಾಮಾನಾಯ್ಕ್, ಪ್ರವೀಣ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

8 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

9 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

9 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

10 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

11 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

15 hours ago