ಅಂಗವಿಕಲೆ ಯುವತಿಯ ಕೈಕಾಲು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ ಬಲತ್ಕಾರದಿಂದ ಅತ್ಯಾಚಾರ ಎಸಗಿದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ !

0 51

ಶಿವಮೊಗ್ಗ: ಅಂಗವಿಕಲೆ ಯುವತಿಯ ಕೈಕಾಲು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ, ಬಲತ್ಕಾರದಿಂದ ಅತ್ಯಾಚಾರ ಎಸಗಿದಂತ ಆರೋಪಿಗೆ, ಇಂದು ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ಜೊತೆಗೆ 40 ಸಾವಿರ ರೂ. ದಂಡ ವಿಧಿಸಿ ಕೋರ್ಟ್‌ ಆದೇಶಿಸಿದೆ.

ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರ ಅಂಗವಿಕಲೆ ಯುವತಿ ಮೇಲೆ ಅದೇ ಗ್ರಾಮದ ಸತೀಶ್ ಎಂಬಾತ ತಮ್ಮ ಮನೆಯ ಪಕ್ಕದಲ್ಲಿಯೇ ಇದ್ದಂತ ಅಂಗವಿಕಲೆ ಯುವತಿಯನ್ನು ಕೈಕಾಲು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ, ಬಲತ್ಕಾರದಿಂದ ಅತ್ಯಾಚಾರವೆಸಗಿದ್ದನು.

2019ರ ಡಿ.27 ನಡೆದಿದ್ದ ಘಟನೆ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಸಿಪಿಐ ಗಣೇಶಪ್ಪ ಜಿ.ವಿ ಅವರು ಈ ಪ್ರಕರಣ ಸಂಬಂಧ ತನಿಖೆ ನಡೆಸಿ, ಆರೋಪಿ ಸತೀಶ್ ವಿರುದ್ಧ ಐಪಿಸಿ ಕಲಂ 376(ಎಲ್)ರ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದಂತ ಶಿವಮೊಗ್ಗದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಮಾನು ಅವರು ಮಂಗಳವಾರ ಆರೋಪಿ ಸತೀಶ್ ಗೆ 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 40 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ.

ಅಂಗವಿಕಲೆ ಮೇಲಿನ ಅತ್ಯಾಚಾರ ಪ್ರಕರಣದ ಸಂಬಂಧ ಸಂತ್ರಸ್ತೆಯ ಪರವಾಗಿ ಸರ್ಕಾರಿ ಅಭಿಯೋಜಕರಾಗಿ ಜೆ.ಶಾಂತರಾಜ್ ಹಾಗೂ ಬಿಎಸ್ ಮಮತ ವಾದಿಸಿದ್ದರು.

Leave A Reply

Your email address will not be published.

error: Content is protected !!