ಅಪ್ರಾಪ್ತೆಯ ಅಶ್ಲೀಲ ಫೊಟೋಗಳನ್ನು ತೆಗೆದು ಆಕೆಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಕಠಿಣ ಶಿಕ್ಷೆ

0 0

ಶಿವಮೊಗ್ಗ: ಕಳೆದ 2019 ನೇ ಸಾಲಿನಲ್ಲಿ ಶಿವಮೊಗ್ಗ ನಗರದ 24 ವರ್ಷದ ಯುವಕನೊಬ್ಬನು, ತನ್ನ ಮೊಬೈಲ್ ನಲ್ಲಿ 14 ವರ್ಷದ ಅಪ್ರಾಪ್ತೆಯ ಅಶ್ಲೀಲ ಫೊಟೋಗಳನ್ನು ತೆಗೆದು, ಆಕೆಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆಂದು ನೊಂದ ಬಾಲಕಿಯು ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಆರೋಪಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ.

ಅಂದು ದಾಖಲಿಸಿಕೊಳ್ಳಲಾಗಿದ್ದ ಈ ಪ್ರಕರಣದ ಕುರಿತಂತೆ ವಿಚಾರಣೆ ನಡೆದಿತ್ತು. ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಅಭಯ್ ಪ್ರಕಾಶ್ ಸೋಮನಾಳ್,ಪಿಐ, ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆರವರು ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ. ಪ್ರಕರಣದಲ್ಲಿ ಸರೋಜ, ಮಹೆಚ್.ಸಿ ಹಾಲಿ ಜಯನಗರ ಪೊಲೀಸ್ ಠಾಣೆರವರು ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರು ದಿನಾಂಕ: 02-05-2023 ರಂದು ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗೆ 01 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 3,01,000 ರೂ ದಂಡ ವಿಧಿಸಿ ಆದೇಶ ನೀಡಿರುತ್ತಾರೆ.

Leave A Reply

Your email address will not be published.

error: Content is protected !!