ಅಮ್ಮನಘಟ್ಟ ಜೀರ್ಣೋದ್ಧಾರ ಅನುದಾನ ಬಿಡುಗಡೆಗೆ ತಹಶೀಲ್ದಾರ್ ಮೀನಾ-ಮೇಷ ; ಧರಣಿಗೆ ಮುಂದಾದ ಮಾಜಿ ಶಾಸಕ ಬಿ.ಸ್ವಾಮಿರಾವ್

0 2,309

ಹೊಸನಗರ : ತಾಲೂಕಿನ ಇತಿಹಾಸ ಪ್ರಸಿದ್ದ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಜೀರ್ಣೋದ್ದಾರ ಅಂಗವಾಗಿ ರಾಜ್ಯ ಸರ್ಕಾರ ಮಂಜೂರು ಮಾಡಿರುವ ಒಂದು ಕೋಟಿ ರೂ. ಅನುದಾನ ಬಿಡುಗಡೆಗೆ ಮೀನಾ-ಮೇಷ ಎಣಿಸುತ್ತಿರುವ ತಹಶೀಲ್ದಾರ್ ರಶ್ಮಿ ಅವರ ಕ್ರಮವನ್ನು ಖಂಡಿಸಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಬಿ.ಸ್ವಾಮಿರಾವ್ ಡಿ.7ರ ಗುರುವಾರ ಬೆಳಗ್ಗೆ 10 ಗಂಟೆಗೆ ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ‌.

ಈ ಹೋರಾಟಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ತಾಲೂಕು ಅಧ್ಯಕ್ಷ ಗಣಪತಿ ಬಿಳಗೋಡು ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ ಎಂದು ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!