ಆಗುಂಬೆ ಘಾಟ್ ಭಾರೀ ವಾಹನ ಸಂಚಾರ ನಿಷೇಧ ಹಿಂಪಡೆತ ; ಸಂಚಾರಕ್ಕೆ ಅನುವು

0 6


ಶಿವಮೊಗ್ಗ :‌ ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ಸೆ.15 ರವರೆಗೆ ಅಧಿಸೂಚಿಸಲಾಗಿದ್ದ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.


ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕೆಂದು ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯನ್ನು ಪರಿಗಣನೆ ತೆಗೆದುಕೊಂಡು ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಆದೇಶಿಸಿದ್ದಾರೆ.

Leave A Reply

Your email address will not be published.

error: Content is protected !!