ಆರೋಗ್ಯ ಮತ್ತು ಪೌಷ್ಠಿಕ ಸಮೀಕ್ಷೆ ; ಮಾಹಿತಿ ನೀಡಲು ಮನವಿ

0 8

ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ಶಿವಮೊಗ್ಗ ಜಿಲ್ಲೆಯಾದ್ಯಾಂತ ಆರೋಗ್ಯ ಮತ್ತು ಪೌಷ್ಠಿಕ ಸಮೀಕ್ಷೆ ನಡೆಸುತ್ತಿದ್ದು, ಶಿವಮೊಗ್ಗ, ಭದ್ರಾವತಿ, ಸಾಗರ, ತೀರ್ಥಹಳ್ಳಿ, ಶಿಕಾರಿಪುರ, ಹೊಸನಗರ, ಸೊರಬ ನಗರಗಳಲ್ಲಿ ಗ್ರಾಮೀಣ ಭಾಗದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸಮೀಕ್ಷೆ ಮಾಡಲು ಬಂದಾಗ ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನು ಮತ್ತು ಅವರು ಕೇಳುವ ಮಾಹಿತಿ ನೀಡಿ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿಯವರು ಸಾರ್ವಜನಿಕರಲ್ಲಿ ಮನವಿ ಮಾಡಿರುತ್ತಾರೆ.

Leave A Reply

Your email address will not be published.

error: Content is protected !!