ಈಶ್ವರಪ್ಪ ಆಗಲಿ ಅಥವಾ ಅವರ ಮಗನೇ ಆಗಲಿ ಸ್ಪರ್ಧೆ ಮಾಡಬೇಕು ಅವರ ವಿರುದ್ಧವೇ ನಾನು ಸ್ಪರ್ಧಿಸುತ್ತೇನೆ ; ಆಯನೂರು ಮಂಜುನಾಥ್

ಶಿವಮೊಗ್ಗ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದ ಆಯನೂರು ಮಂಜುನಾಥ್ ಇಂದು ಶಾಸಕರ ಹೊಸ ಕಾರ್ಯಾಲಯ ಉದ್ಘಾಟಿಸುವ ಮೂಲಕ ಕಾದುನೋಡುವ ತಂತ್ರಕ್ಕೆ ಜಾರಿದ್ದಾರೆ.

ಅವರು ಇಂದು ಬಿಜೆಪಿ ಕಚೇರಿಯ ಸನಿಹದಲ್ಲೇ ಶಾಸಕರ ಹೊಸ ಕಾರ್ಯಾಲಯವನ್ನು ಶುಭಾರಂಭ ಮಾಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ನನ್ನ ಅಧಿಕೃತ ಕಚೇರಿಯನ್ನು ಮುಚ್ಚಲಾಗಿದೆ. ಆದ್ದರಿಂದ ಜನರೊಂದಿಗೆ ಬೆರೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಹೊಸ ಕಾರ್ಯಾಲಯವನ್ನು ಆರಂಭಿಸಿದ್ದೇನೆ ಎಂದರು.

ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರವನ್ನು ಮಾಡಬೇಕಾಗುತ್ತದೆ ಆದರೆ ಅದೇ ಮುಖ್ಯವಲ್ಲ. ಮುಖ್ಯವಾಗಿ ಶಿವಮೊಗ್ಗದಲ್ಲಿ ಶಾಂತಿ ಬಯಸುವವನು ನಾನು. ಈಗಲೂ ಮತ್ತೆ ಮತ್ತೆ ಹೇಳುತ್ತೇನೆ. ಕೆ.ಎಸ್. ಈಶ್ವರಪ್ಪ ಅವರಾಗಲಿ ಅಥವಾ ಅವರ ಮಗನೇ ಆಗಲಿ ಸ್ಪರ್ಧೇ ಮಾಡಬೇಕು. ಅವರ ವಿರುದ್ಧವೇ ನಾನು ಸ್ಪರ್ಧಿಸುತ್ತೇನೆ. ಹಾಗಂತ ಅವರ ಕೈಗೊಂಬೆಯಂತಿರುವವರು ಸ್ಪರ್ಧಿಸಿದರೂ ಕೂಡ ನಾನು ಅವರ ವಿರುದ್ಧ ಸ್ಪರ್ಧಿಸುತ್ತೇನೆ. ನನಗೆ ಶಾಂತಿ ಮುಖ್ಯ ಎಂದರು.

ಮೋದಿ ಮತ್ತು ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ. ಇಲ್ಲಿ ಕುಟುಂಬ ರಾಜಕಾರಣವಿದೆ. ವಯಸ್ಸಿನ ಏರುಪೇರಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಮೋದಿಯವರು ತಮ್ಮ ಕುಟುಂಬವನ್ನೇ ಏಕೆ, ತಮ್ಮ ತಾಯಿಯವರನ್ನೇ ರಾಜಕೀಯದ ನೆರಳನ್ನೂ ಕಾಣದಂತೆ ಸಾಕಿದ್ದವರು. ಅಂತಹ ಮಹಾನ್ ವ್ಯಕ್ತಿಯ ವ್ಯಕ್ತಿತ್ವ ಇಲ್ಲಿ ಯಾರಿಗೂ ಇಲ್ಲ. ಹಾಗಾಗಿ ಗುಜರಾತ್ ಮಾದರಿಯ ಮೋದಿ ಮಾದರಿಯ ಚುನಾವಣೆ ಎಲ್ಲಿ ಸಾಧ್ಯ ಎಂದರು.

ನೀವು ವಿಧಾನಸಭೆ ಪ್ರವೇಶ ಮಾಡಲೇಬೇಕು ಎಂದು ಹಲವು ಗೆಳೆಯರು, ಮತದಾರರು, ಬಿಜೆಪಿ ಕಾರ್ಯಕರ್ತರು ಅಭಿಲಾಷೆ ಪಡುತ್ತಿದ್ದಾರೆ. ಕಾರ್ಮಿಕರು, ಆಟೋ ಚಾಲಕರು ಒತ್ತಾಯ ಮಾಡುತ್ತಿದ್ದಾರೆ. ಅವರ ಪ್ರೀತಿಗೆ ಹೃದಯ ತುಂಬಿ ಬಂದಿದೆ. ನನ್ನ ಎಲ್ಲಾ ನಿರ್ಧಾ ರಗಳನ್ನು ಎಲ್ಲರ ಸಲಹೆ ಪಡೆದೇ ತೆಗೆದುಕೊಳ್ಳುತ್ತೇನೆ ಈ ಎಲ್ಲಾ ನಿರ್ಧಾರ ತೆಗೆದುಕೊಳ್ಳಲು ಮೂರು ನಾಲ್ಕು ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Articles

error: Content is protected !!