ಶಿವಮೊಗ್ಗ : ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ಇದೆ.
ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಚೋರಡಿ ಬಳಿ ಈ ಅಪಘಾತ ಸಂಭವಿಸಿದೆ. ಎರಡು ಬಸ್ಸಿನಲ್ಲಿದ್ದ ಇನ್ನಷ್ಟು ಪ್ರಯಾಣಿಕರಿಗೆ ಗಂಭೀರ ಗಾಯವಾದ ಬಗ್ಗೆ ವರದಿಯಾಗಿದೆ.
ಈ ಅಪಘಾತದಲ್ಲಿ ಎರಡೂ ಬಸ್‌ಗಳು ಒಂದಕ್ಕೊಂದು ಸೇರಿಕೊಂಡಿದ್ದು ಜೆಸಿಬಿ ಬಳಸಿ ಬೇರ್ಪಡಿಸಿ ಬಸ್‌ಗಳ ಮಧ್ಯೆ ಸಿಲುಕಿಕೊಂಡಿರುವ ಪ್ರಯಾಣಿಕರನ್ನೂ ರಕ್ಷಣೆ ಕಾರ್ಯ ತೊಡಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಎರಡು ಬಸ್‌ಗಳು ಶಿಕಾರಿಪುರದ ರೂಟ್ ಬಸ್‌ಗಳಾಗಿದ್ದು ಪರಸ್ಪರ ಡಿಕ್ಕಿಯಾಗಿದೆ. ಕುಮುದ್ವತಿ ಸೇತುವೆ ಬಳಿ ಘಟನೆ ನಡೆದಿದ್ದು ಸ್ಥಳಕ್ಕೆ ನಾಲ್ಕು ಆಂಬುಲೆನ್ಸ್ ಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.