ಒಂದು ತಿಂಗಳು ಶಿವಮೊಗ್ಗಕ್ಕೆ ಭೇಟಿ ನೀಡದಂತೆ ಮುತಾಲಿಕ್’ಗೆ ನಿರ್ಬಂಧ

0 141

ಶಿವಮೊಗ್ಗ : ಗಲಭೆ ಪೀಡಿತ ಪ್ರದೇಶ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರವರಿಗೆ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ.

ಮಂಗಳವಾರ ರಾತ್ರಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಪೊಲೀಸರು ಪ್ರಮೋದ್ ಮುತಾಲಿಕ್ ಅವರನ್ನು ಹೊಸನಗರದ ತಾಲೂಕಿನ ಮಾಸ್ತಿಕಟ್ಟೆ ಬಳಿ ತಡೆದು ಮುಂದಿನ ಮೂವತ್ತು ದಿನಗಳ ಮಟ್ಟಿಗೆ ಶಿವಮೊಗ್ಗ ತೆರಳದಂತೆ ನಿರ್ಬಂಧ ಹೇರಲಾಗಿರುವ ಪ್ರತಿಯನ್ನು ನೀಡಿದ್ದಾರೆ.

ಗಲಭೆ ಪೀಡಿತ ಪ್ರದೇಶದಲ್ಲಿ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪ್ರಚೋದನಕಾರಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಾಗಿದೆ. ಅಲ್ಲದೆ ರಾಗಿಗುಡ್ಡ ಪ್ರದೇಶದಲ್ಲಿ ಈಗಾಗಲೇ ಸೆಕ್ಷನ್ 144 ನಿಷೇಧಾಜ್ಞೆ ಜಾರಿಯಲ್ಲಿದ್ದು ಹೀಗಾಗಿ ಮುಂದಿನ 30 ದಿನ ಶಿವಮೊಗ್ಗ ಪ್ರವೇಶಿಸದಂತೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ.

Leave A Reply

Your email address will not be published.

error: Content is protected !!