ಕಳಚಿದ ಪತ್ರಿಕೋದ್ಯಮದ ಹಿರಿಯಕೊಂಡಿ !

0 0

ಶಿವಮೊಗ್ಗ : ಹಿರಿಯ ಪತ್ರಕರ್ತ, ಕ್ರಾಂತಿಭಗತ್ ಪತ್ರಿಕೆಯ ಸಂಪಾದಕ, ಹೋರಾಟಗಾರ ಕಾಮ್ರೇಡ್ ಎಂ. ಲಿಂಗಪ್ಪ ಅವರ ನಿಧನದಿಂದಾಗಿ ಪತ್ರಿಕೋದ್ಯಮದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಶಿವಮೊಗ್ಗ ಪ್ರೆಸ್‌ಟ್ರಸ್ಟ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ತಮ್ಮ ನಿಷ್ಠುರ ನುಡಿಗಳಿಂದ, ನೇರಾ ನೇರಾ ಮಾತುಗಳಿಂದ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ಅಂದುಕೊಂಡಂತೆ ನಡೆದವರು. ಸಮಾಜದಲ್ಲಿ ಆಗುತ್ತಿದ್ದ ಅನ್ಯಾಯಗಳನ್ನು ಕಟು ಮಾತುಗಳಿಂದ ಟೀಕಿಸುತ್ತಿದ್ದರು. ಇವರ ನಿಧನ ಪತ್ರಿಕೋದ್ಯಮಕ್ಕೆ ಆದ ದೊಡ್ಡ ನಷ್ಟ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಪ್ರೆಸ್‌ಟ್ರಸ್ಚ್ ಅಧ್ಯಕ್ಷ ಎನ್. ಮಂಜುನಾಥ್, ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಎಸ್. ಚಂದ್ರಕಾಂತ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಉಪಾಧ್ಯಕ್ಷ ಕೆ. ತಿಮ್ಮಪ್ಪ, ಖಜಾಂಚಿ ನಂದನ್, ಕಾರ್ಯದರ್ಶಿ ಗೋ.ವ. ಮೋಹನಕೃಷ್ಣ, ಟ್ರಸ್ಟ್‌ ಉಪಾಧ್ಯಕ್ಷ ಚಂದ್ರಹಾಸ್ ಹಿರೇಮಳಲಿ, ಕಾರ್ಯದರ್ಶಿ ನಾಗರಾಜ್ ನೇರಿಗೆ, ಖಜಾಂಚಿ ಜೇಸುದಾಸ್, ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್, ಸಹಕಾರ್ಯದರ್ಶಿ ಗಿರೀಶ್ ಉಮ್ರಾಯ್ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.

error: Content is protected !!