ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ !

0 729

ತೀರ್ಥಹಳ್ಳಿ : ತಾಲೂಕಿನ ಕೋಣಂದೂರು (Konandoor) ಸಮೀಪದ ಅಕ್ಲಾಪುರದ (Aklapura) ನಿವಾಸಿ ರವಿ ಎಲ್ ಗೌಡ (55) ಎಂಬುವವರ ಶವ (Dead Body) ಹೊದಲ (Hodala) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದಲ ಬಸ್ ನಿಲ್ದಾಣದಲ್ಲಿ (Bus Stand) ಪತ್ತೆಯಾಗಿದೆ.

ರವಿ ಗೌಡ ಶುಕ್ರವಾರ ಸಂಜೆಯಿಂದ ಕಾಣೆಯಾಗಿದ್ದು ಕುಟುಂಬಸ್ಥರು ಎಲ್ಲಾ ಕಡೆ ಹುಡುಕಿ ನಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಇಂದು ಶವವಾಗಿ ಪತ್ತೆಯಾಗಿದ್ದಾರೆ.

ರವಿ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!