ಕೃಷಿ ಅಧಿಕಾರಿ ಸೇರಿ ಇಬ್ಬರು ನೀರಿನಲ್ಲಿ ಮುಳುಗಿ ಸಾವು !
ಸಾಗರ: ಕೃಷಿ ಅಧಿಕಾರಿ ಸೇರಿದಂತೆ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮೃತರನ್ನು ಸಾಗರದ ಕೃಷಿ ಇಲಾಖೆಯ ಅಧಿಕಾರಿ ಕೆ.ಟಿ. ಕೃಷ್ಣಕುಮಾರ್ (36) ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ನ ಕಲೆಕ್ಟರ್ ಅರುಣ್ (28) ಎಂದು ಗುರುತಿಸಲಾಗಿದೆ.
ರಜಾದಿನವಾಗಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತ ತಾಲೂಕಿನ ಜೋಗ್ ಫಾಲ್ಸ್ ಪ್ರವಾಸಕ್ಕೆ ತೆರಳಿದ್ದ ಇವರು ಜೋಗದ ಸಮೀಪದ ದೇವಿಗುಂಡಿ ಬಳಿ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ.

ಕಾರ್ಗಲ್ ಸಬ್ ಇನ್ಸ್‌ಪೆಕ್ಟರ್ ಹೊಳೆಬಸಪ್ಪ ಮತ್ತು ಸಿಬಂದಿ ಘಟನೆಯ ಸ್ಥಳಕ್ಕೆ ತೆರಳಿ ಶವಗಳನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಸಾಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.