ಕ್ರೀಡಾಕೂಟ ; ರಾಜ್ಯ ಮಟ್ಟಕ್ಕೆ ಆಯ್ಕೆ

0 409


ಹೊಸನಗರ: ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ 17 ವರ್ಷದ ವಯೋಮಿತಿಯೊಳಗಿನ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ತಾಲೂಕಿನ ಮಾರುತಿಪುರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಗಮನಾರ್ಹ ಪ್ರದರ್ಶನ ನೀಡಿದ್ದಾರೆ.

ಮೂವರು ವಿದ್ಯಾರ್ಥಿಗಳು ಪದಕ ಗಳಿಸಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಡಿಸ್ಕಸ್‌ ಥ್ರೋನಲ್ಲಿ ಆಯಿಷಾ ಸನಾ, ನಡಿಗೆ ಸ್ಪರ್ಧೆಯಲ್ಲಿ ಎಸ್ ಪ್ರಜ್ವಲ್ ಹಾಗೂ 400 ಮೀ. ಓಟದಲ್ಲಿ ಆರ್ ಮಾನ್ಯ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


400 ಮೀ. ಓಟದಲ್ಲಿ ಎ.ಸಿ.ಸಹನ, 3000 ಮೀ. ಓಟದಲ್ಲಿ ಎಸ್.ಎನ್.ಶ್ರೇಯಸ್ ಹಾಗೂ 800 ಮೀ. ಓಟದಲ್ಲಿ ಸಿ.ಎಂ.ಮಾನಸ ತೃತೀಯ ಸ್ಥಾನ ಗಳಿಸಿದ್ದಾರೆ.


ಅಭಿನಂದನೆ:

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಸೈಯದ್ ಇದ್ರಿಸ್‌ರವರಿಗೆ ಎಸ್‌ಡಿಎಂಸಿ ಅಧ್ಯಕ್ಷ ಮಂಜಪ್ಪ ಹೆಚ್ ಹಾಗೂ ಮುಖ್ಯ ಶಿಕ್ಷಕರು, ಸಹಶಿಕ್ಷಕರು ಅಭಿನಂದಿಸಿದ್ದಾರೆ.

Leave A Reply

Your email address will not be published.

error: Content is protected !!