ಕ್ರೀಡಾಕೂಟ ; ರಿಪ್ಪನ್‌ಪೇಟೆ ಸ.ಪ.ಪೂ. ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಮತ್ತೊಮ್ಮೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮೇಲುಗೈ ಸಾಧಿಸುವುದರೊಂದಿಗೆ 12 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ರಾಜ್ಯ ಮಟ್ಟದಲ್ಲಿ ರಿಪ್ಪನ್‌ಪೇಟೆ ಹಿರಿಮೆಯನ್ನು ಹೆಚ್ಚಿಸಲಿದ್ದಾರೆ.

ಸೆಪ್ಟೆಂಬರ್ 23 ಮತ್ತು 24ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ.
ಬಾಲಕರ ವಿಭಾಗದಲ್ಲಿ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಖೋ-ಖೋ ದಲ್ಲಿ ಓರ್ವ ವಿದ್ಯಾರ್ಥಿ ಸೇರಿದಂತೆ ಒಟ್ಟು 11 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು, ಪ್ರಾಚಾರ್ಯ ಎ. ಮಂಜುನಾಥ್,
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜಿ.ಆರ್ ಕೃಷ್ಣಮೂರ್ತಿ, ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಉಪನ್ಯಾಸಕರು, ಗ್ರಾಮಸ್ಥರು, ಪೋಷಕರುಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.