ಕ್ರೀಡಾಕೂಟ | ಸಮಟಗಾರು ಶಾಲೆ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ ; ಅಭಿನಂದನೆ

0 470

ರಿಪ್ಪನ್‌ಪೇಟೆ : ಇಂದು ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ಹುಂಚ ಗ್ರಾಪಂ ವ್ಯಾಪ್ತಿಯ ಸ.ಹಿ.ಪ್ರಾ. ಶಾಲೆ ಸಮಟಗಾರು ಇಲ್ಲಿನ ವಿದ್ಯಾರ್ಥಿನಿ ಕು|| ರಕ್ಷಿತಾ 100 ಮೀಟರ್ ವೇಗದ ಓಟದ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಅಭಿನಂದನೆ :
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕ ವೃಂದ, SDMC ಅಧ್ಯಕ್ಷರು ಹಾಗೂ ಸದಸ್ಯರು, ಪೋಷಕ ವೃಂದ, ಸಿ.ಆರ್.ಪಿ ದೀಪ ಹಾಗೂ ಗ್ರಾಮಸ್ಥರು ಶುಭ ಹಾರೈಸಿ ಅಭಿನಂದಿಸಿದ್ದಾರೆ.

Leave A Reply

Your email address will not be published.

error: Content is protected !!