‘ಖಾಕಿ ಕವಿ’ಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

0 458

ಹೊಸನಗರ : ಶಿಸ್ತು, ಸಂಯಮಕ್ಕೆ ಹೆಸರಾದ ಪೊಲೀಸ್ ಇಲಾಖೆಯಲ್ಲಿ (Police department) ಪ್ರಾಮಾಣಿಕ ಕರ್ತವ್ಯ ನಿರ್ವಹಿಸುವ ಜೊತೆಗೆ ತಮ್ಮ ವಿನೂತನ ಶೈಲಿಯ ಕವನ ಸಂಕಲನಗಳ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಲು ಶ್ರಮಿಸುತ್ತಿರುವ ಹಾಗೂ ಜಿಲ್ಲೆಯಾದ್ಯಂತ ‘ಖಾಕಿ ಕವಿ’ ಎಂದೇ ಖ್ಯಾತಿ ಹೊಂದಿರುವ ತಾಲೂಕಿನ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮಂಜುನಾಥ ಅವರು 2023ನೇ ಸಾಲಿನ ಸುವರ್ಣ ಕರ್ನಾಟಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ಕನ್ನಡ ಸಾಹಿತ್ಯ ವೇದಿಕೆ (ರಿ) ವತಿಯಿಂದ ಕರ್ನಾಟಕ ಏಕೀಕರಣ ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಇವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಪಾರ ಕೊಡುಗೆ ಪರಿಗಣಿಸಿ, ಇದೇ 2023 ನವೆಂಬರ್ 19ರ ಭಾನುವಾರ ಶಿವಮೊಗ್ಗ ಜಿಲ್ಲಾ ಘಟಕ ಆಯೋಜಿಸಿದ್ದ ‘ಕರುನಾಡು ಸಾಮರಸ್ಯ ಕಾವ್ಯ ಸಮ್ಮಿಲನ’ ಕಾರ್ಯಕ್ರಮದಲ್ಲಿ ಖಾಕಿ ಕವಿ ಮಂಜುನಾಥ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ವೇಳೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್ ಉಪ್ಪಾರ್, ಜಿಲ್ಲಾಧ್ಯಕ್ಷೆ, ಸಾಹಿತಿ ಡಾ. ಹಸೀನಾ ಹೆಚ್.ಕೆ. ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.


ಪ್ರಶಸ್ತಿಗೆ ಭಾಜನರಾದ ಮಂಜುನಾಥ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್‌ಪಿ ಗಜಾನನ ವಾಮನ ಸುತಾರ, ಹೊಸನಗರ ಸಿಪಿಐ ಗುರಣ್ಣ ಎಸ್ ಹೆಬ್ಬಾಳ್, ನಗರ ಠಾಣೆ ಪಿಎಸ್‌ಐ ರಮೇಶ್ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದೆ.

Leave A Reply

Your email address will not be published.

error: Content is protected !!