ಖಾಯಂ ಶಿಕ್ಷಕರನ್ನು ಕೊಡಿ ; ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ, ಬಿಇಒ ಕಚೇರಿ ಮುಂದೆ ಧರಣಿ

0 18

ಹೊಸನಗರ: ತಾಲ್ಲೂಕಿನ ಮೂಡುಗೊಪ್ಪ – ನಗರ ವ್ಯಾಪ್ತಿಯ ದುಬಾರ್‌ತಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ಸಾಕಷ್ಟು ಬಾರಿ ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಶಿಕ್ಷಣಾಧಿಕಾರಿಗಳನ್ನು ಆರೋಪಿಸಿ ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಗ್ರಾಮ ಪಂಚಾಯಿತಿ ಸದಸ್ಯ ಕರುಣಾಕರ ಶೆಟ್ಟಿಯವರ ನೇತೃತ್ವದಲ್ಲಿ ಸುಮಾರು 16 ಕಿ.ಮೀ. ಕಾಲ್ನಡಿಗೆಯಲ್ಲಿ ಹೊಸನಗರ ಶಿಕ್ಷಣಾಧಿಕಾರಿಗಳ ಕಛೇರಿಗೆ ಆಗಮಿಸಿ ಇಲಾಖೆಯ ಮುಂದೆ ಖಾಯಂ ಶಿಕ್ಷಕರು ನೀಡುವವರೆಗೆ ಧರಣಿ ನಡೆಸುತ್ತಿದ್ದಾರೆ.


ಈ ಶಾಲೆಯಲ್ಲಿ 1ರಿಂದ 5ನೇ ತರಗತಿಯವರೆಗೆ 15 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಶಿಕ್ಷಕರಿಲ್ಲದೇ ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ ಎಂದು ಆರೋಪಿಸುತ್ತಿದ್ದು ಇಂದೇ ಖಾಯಂ ಶಿಕ್ಷಕರನ್ನು ನೀಡುವವರೆಗೆ ನಾವು ಕಛೇರಿಯ ಮುಂದೆ ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.


ಈ ಧರಣಿಯಲ್ಲಿ ಪ್ರಮುಖರಾದ ನಾಗೇಶ, ಇದಾಯತ್, ಗಣೇಶ, ಮಾರುತಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!