ಗಣಪತಿ ವಿಸರ್ಜನೆ ಶಾಂತಿ ಮತ್ತು ಸುವ್ಯವಸ್ಥೆ ಹಾಗೂ ಸೌಹಾರ್ದಯುತವಾಗಿ ಮುಕ್ತಾಯಗೊಂಡಿರುವುದು ಶ್ಲಾಘನೀಯ ; ಮಧು ಬಂಗಾರಪ್ಪ

0 78

ಶಿವಮೊಗ್ಗ: ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮ ಗುರುವಾರ ಶಾಂತಿ ಮತ್ತು ಸುವ್ಯವಸ್ಥೆ ಹಾಗೂ ಸೌಹಾರ್ದಯುತವಾಗಿ ಮುಕ್ತಾಯಗೊಂಡಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.


ಸೆ.18ರಿಂದ ಪ್ರಾರಂಭಗೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗಣಪತಿಯ ಪೂಜಾನುಷ್ಠಾನ ನಡೆದಿದ್ದು, ನಿನ್ನೆ ಗಣಪತಿಯ ವಿಸರ್ಜನಾ ಕಾರ್ಯ ಸೌಹಾರ್ದಯುತವಾಗಿ ನಡೆದಿದ್ದು, ಅದಕ್ಕೆ ಕಾರಣರಾದ ಕಾರ್ಯಕ್ರಮದ ಆಯೋಜಕರು, ಜನಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಭಕ್ತವೃಂದ ಹಾಗೂ ಜಿಲ್ಲಾಡಳಿತಕ್ಕೆ ತಮ್ಮ ಅಭಿನಂದನೆ ತಿಳಿಸಿದ್ದಾರೆ.


ಹಾಗೆಯೇ ಜಿಲ್ಲೆಯ ಎಲ್ಲಾ ಕಾರ್ಯಕ್ರಮಗಳು ಹೀಗೆಯೇ ಶಾಂತಿಯುತವಾಗಿ ನಡೆದು ಎಲ್ಲಾ ವರ್ಗದ ಜನರಲ್ಲಿ ಸೌಹಾರ್ದತೆ ನೆಲೆಸಲಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ದಾರಿದೀಪವಾಗಲಿ ಎಂದು ಅವರು ಆಶಿಸಿದ್ದಾರೆ.

Leave A Reply

Your email address will not be published.

error: Content is protected !!