ಗ್ರಾಪಂ ಉಪ ಚುನಾವಣೆ ; ಶಸ್ತ್ರಾಸ್ತ್ರ ಠೇವಣಿಗೆ ಸೂಚನೆ

0 9


ಶಿವಮೊಗ್ಗ : ಗ್ರಾಮ ಪಾಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಕಾರಣ ಆ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಯ ಸಾರ್ವಜನಿಕರ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಲು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.


ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೆದ್ದಾರಿಪುರ-12, ನಾಗೋಡಿ(ನಿಟ್ಟೂರು)-18 ಹಾಗೂ ಭದ್ರಾವತಿ ತಾಲ್ಲೂಕಿನ ಯಡೇಹಳ್ಳಿ-09 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಠೇವಣಿಯಲ್ಲಿ ಇಡಲಾದ ಶಸ್ತ್ರ/ಆಯುಧಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳು ಸುರಕ್ಷಿತವಾಗಿ ಇಟ್ಟುಕೊಳ್ಳುವುದಲ್ಲದೇ ಠೇವಣಿ ಮಾಡಿದ ಆಯುಧ ಪರವಾನಿಗೆದಾರರಿಗೆ ಸೂಕ್ತ ರಶೀದಿಯನ್ನು ತಪ್ಪದೇ ನೀಡುವುದು. ಈ ಆಯುಧಗಳನ್ನು ಚುನಾವಣಾ ಫಲಿತಾಂಶವನ್ನು ಘೋಷಿಸಿದ ನಂತರ ಡಿಪಾಸಿಟ್ ಮಾಡಿದ ಪರವಾನಿಗೆದಾರರಿಗೆ ಹೊಂದಿರುಗಿಸಲಾಗುವುದು.


ಸರ್ಕಾರಿ ಕರ್ತವ್ಯದಲ್ಲಿ ನಿರತರಾದ ರಕ್ಷಣಾ ಸಿಬ್ಬಂದಿಗಳಿಗೆ ಎಂ.ಪಿ.ಎಂ/ವಿ.ಐ.ಎಸ್.ಎಲ್ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಇತ್ಯಾದಿಗಳಲ್ಲಿ ಭದ್ರತಾ ಕರ್ತವ್ಯದಲ್ಲಿರುವ ಸಿಬ್ಬಂದಿಗಳು ಅಧಿಕೃತ ಪರವಾನಿಗೆಯಲ್ಲಿ ಹೊಂದಿರುವ ಆಯುಧಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ. ಚುನಾವಣೆಯು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕಾಗಿರುವುದರಿಂದ ಜಿಲ್ಲಾ ಆಡಳಿತವು ಕೈಗೊಂಡ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕಾಗಿ ಅವರು ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!