ಚಂದ್ರಗುತ್ತಿ ; ವೀರಭದ್ರೇಶ್ವರ ಸ್ವಾಮಿ ವಾರ್ಷಿಕೋತ್ಸವ ಪ್ರಯುಕ್ತ ವಿಜೃಂಭಣೆಯಿಂದ ಜರುಗಿದ ಗುಗ್ಗಳ

0 182

ಸೊರಬ : ಇಲ್ಲಿನ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾಪನೆಯ 5ನೇ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.

ದೇವಾಲಯದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೂಲ ಮಂತ್ರ ಜಪಾ ಹೋಮ ಹವನಗಳು, ಶ್ರೀ ಚೌಡೇಶ್ವರಿ ದೇವಿಗೆ ಅಭಿಷೇಕ, ಕುಂಕುಮಾರ್ಚನೆ, ಅಲಂಕಾರಿಕ ಪೂಜೆ, ಮಹಾಮಂಗಳಾರತಿ ಜರುಗಿದವು.

ಗ್ರಾಮದ ಶ್ರೀ ಮಹಾಗಣಪತಿ ದೇವಸ್ಥಾನದಿಂದ ಮುಖ್ಯ ರಸ್ತೆ ಮಾರ್ಗವಾಗಿ ಶ್ರೀ ವೀರಭದ್ರೇಶ್ವರ ಸ್ವಾಮಿ  ದೇವಸ್ಥಾನದವರೆಗೆ ಗುಗ್ಗಳ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಆನವಟ್ಟಿ ಸಮೀಪದ ನೇರಲಗಿ ಗ್ರಾಮದ ಶ್ರೀ ವೀರಭದ್ರೇಶ್ವರ ತಂಡದವರು ಗುಗ್ಗಳ ಕಾರ್ಯಕ್ರಮ ನಡೆಸಿಕೊಟ್ಟರು.

ಮಧ್ಯಾಹ್ನ ಮಹಾ ಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಂತರ ಭಕ್ತರಿಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಯಿತು. ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿಯವರು, ಗ್ರಾಮಸ್ಥರು ಸೇರಿದಂತೆ ಸುತ್ತಲಿನ ಹತ್ತಾರು ಗ್ರಾಮಗಳ ಸಾವಿರಾರು ಭಕ್ತರು ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡಿದ್ದರು.

Leave A Reply

Your email address will not be published.

error: Content is protected !!