ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಲಾರಿ ಪಲ್ಟಿ !
ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಲಾರಿಯೊಂದು (KA07B3487) ಪಲ್ಟಿಯಾದ ಘಟನೆ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಹೊಸನಗರ – ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿ ಸುರುಳಿಕೊಪ್ಪ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಕೊಪ್ಪಳದ ಸಿಂಗನೂರಿಗೆ ತೆರಳುತ್ತಿದ್ದ ಲಾರಿ ಇದಾಗಿದ್ದು ತಡರಾತ್ರಿ 11 ರ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದೆ. ಅದೃಷ್ಟವಶಾತ್ ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಹೊಸನಗರ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂಜಾಗ್ರತಾ ಕ್ರಮ ವಹಿಸಿದ್ದು ಕ್ರೇನ್ ಮೂಲಕ ಲಾರಿ ಮೇಲೆತ್ತುವ ಕಾರ್ಯ ನಡೆಯುತ್ತಿದೆ.
ಈ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.