ಜಾತ್ರೆ ಪ್ರಯುಕ್ತ ವಾಹನಗಳ ಮಾರ್ಗ ಬದಲಾವಣೆ

0 7


ಶಿವಮೊಗ್ಗ: ಫೆ.18 ಮತ್ತು 19 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮಿತ್ತ ಜಾತ್ರೆ ನಡೆಯಲಿದ್ದು, ಫೆ.18 ರ ಬೆಳಿಗಿನ ಜಾವ 4 ರಿಂದ 19 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಜಿಲ್ಲಾಧಿಕಾರಿಗಳು ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಅಧಿಸೂಚನೆ ಹೊರಡಿಸಿದ್ದಾರೆ.


ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ವಾಹನಗಳು ಗಜಾನನ ಗೇಟ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್‍ಹೆಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.
ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್‍ಹೆಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್‍ನಿಂದ ಗಜಾನನ ಗೇಟ್ ಮೂಲಕ ಬಂದು ಶಿವಮೊಗ್ಗ ಸೇರುವುದು.


ಮೇಲ್ಕಂಡ ಮಾರ್ಗಗಳಲ್ಲಿ ಬದಲಾವಣೆಗಳು ಪೊಲೀಸ್ ವಾಹನಗಳು ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!