ಜೂ.27ರ ಒಳಗಾಗಿ ಪಡಿತರ ಪಡೆಯಲು ಸೂಚನೆ

0 0


ಶಿವಮೊಗ್ಗ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸರ್ವರ್ ನಿರ್ವಹಣಾ ಕಾರ್ಯವನ್ನು ಜೂ.28 ರಿಂದ ಕೈಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಜೂನ್-2023ರ ಮಾಹೆಯ ಪಡಿತರವನ್ನು ಜೂ. 27 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ. 27ರೊಳಗಾಗಿ ಪಡಿತರ ವಿತರಣಾ ಕಾರ್ಯವನ್ನು ಕಡ್ಡಾಯವಾಗಿ ಮುಕ್ತಾಯಗೊಳಿಸುವಂತೆ ಹಾಗೂ ಶಿವಮೊಗ್ಗ ಅನೌಪಚಾರಿಕ ಪಡಿತರ ಪ್ರದೇಶ ವ್ಯಾಪ್ತಿಯ ಎಲ್ಲಾ ಅರ್ಹ ಪಡಿತರ ಚೀಟಿದಾರರು ಜೂ.17ರೊಳಗಾಗಿ ಪಡಿತರ ಪಡೆದುಕೊಳ್ಳುವಂತೆ ಮತ್ತು ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ನೋಂದಾಯಿಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!