ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಬಗ್ಗೆ DDPI ಮಹತ್ವದ ಆದೇಶ ; ಏನದು ?

0 20

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲ್ಲೂಕು ವ್ಯಾಪ್ತಿಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳರವರ ಸೂಚನೆಯನ್ವಯ ಮೇಲ್ಕಂಡ ಮೂರು ತಾಲ್ಲೂಕುಗಳ ಶಾಲಾ ಎಸ್.ಡಿ.ಎಂ.ಸಿ.ಯವರು ಮಳೆಯ ತೀವ್ರತೆಗೆ ಅನುಸಾರವಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ಜು.25 ರಂದು ಅಗತ್ಯವಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮಾತ್ರ ಅನ್ವಯವಾಗುವಂತೆ ರಜೆ ಘೋಷಿಸಲು ಕ್ರಮವಹಿಸುವಂತೆ ಹಾಗೂ ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಅಗತ್ಯ ಸೂಚನೆ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

Leave A Reply

Your email address will not be published.

error: Content is protected !!