ದನದ ಮಾಂಸ ಸಾಗಾಟ ; ಓರ್ವನ ಬಂಧನ !

0 1,682

ಸಾಗರ: ಶಿರಾಳಕೊಪ್ಪದಿಂದ ಖಾಸಗಿ ಬಸ್‌ನಲ್ಲಿ ಸಾಗರಕ್ಕೆ ದನದ ಮಾಂಸ ತಂದು ಮಾರಾಟ ಮಾಡುತ್ತಿದ್ದ ರಾಣೆಬೆನ್ನೂರು ಮೂಲದ ಇಮ್ತಿಯಾಜ್ ಎನ್ನುವವನನ್ನು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ನಗರ ಠಾಣೆ ಪೊಲೀಸರು ಬಂಧಿಸಿ, ದನದ ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.

ಈಗಾಗಲೇ ಹಲವು ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಗುರುವಾರ 40 ಕೆ.ಜಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಾರದ ಹಿಂದೆ ಇಮ್ತಿಯಾಜ್ ದನದ ಮಾಂಸ ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Leave A Reply

Your email address will not be published.

error: Content is protected !!