ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ವಿಕೃತಿ ಮೆರೆದ ಕಿಡಿಗೇಡಿಗಳು !

ಶಿವಮೊಗ್ಗ: ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದಲ್ಲಿ ನಡೆದಿದೆ.

ಕಿಡಿಗೇಡಿಗಳು ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕೃತ್ಯದಿಂದ ದೇವಸ್ಥಾನದ ರಥಕ್ಕೆ ಬಹುಪಾಲು ಹಾನಿ ಉಂಟಾಗಿದೆ.

ಮಾಸ್ಕ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ಶಿವಮೊಗ್ಗದ ರಾಗಿಗುಡ್ಡದ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಮಾ.4ರಂದು ಸಂಜೆ 4 ಗಂಟೆ ಹೊತ್ತಿಗೆ ಈ ಘಟನೆ ನಡೆದಿದೆ ಎಂದು ದೇವಸ್ಥಾನದ ಅರ್ಚಕ ರಾಘವೇಂದ್ರ ಅವರು ದೂರಿನಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,755FollowersFollow
0SubscribersSubscribe
- Advertisement -spot_img

Latest Articles

error: Content is protected !!