ನಾಳೆ ಶಿವಮೊಗ್ಗ ಜಿಲ್ಲೆಯಲ್ಲಿ ಸಾರಿಗೆ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ ! ಯಾಕೆ ಗೊತ್ತಾ ?

ಶಿವಮೊಗ್ಗ : ಮಾ.17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುಗಣಿಯ ಸಮಾರಂಭದಲ್ಲಿ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ಘಟಕ ಮತ್ತು ನೂತನ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲು ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲೂಕಿನ ಸಾರ್ವಜನಿಕರು ಆಗಮಿಸಲು ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 125 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಆದ್ದರಿಂದ ಮಾ. 17 ರಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,755FollowersFollow
0SubscribersSubscribe
- Advertisement -spot_img

Latest Articles

error: Content is protected !!